ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ನಿರ್ಮಿಸಿರುವ ಶ್ರೀಗುರುಭೈರವೈಕ್ಯ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಬೆಳ್ಳಿಯ ನವಿಲನ್ನು ಉಡುಗೊರೆಯಾಗಿ ಶ್ರೀಮಠದ ವತಿಯಿಂದ ನೀಡಿದರು. 
ಮಂಡ್ಯ

ಭಕ್ತರಿಗೆ ಆಶಿರ್ವದಿಸಿದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ

ಶಿವಶಂಕರ್ ಎಂ. ಹೆಬ್ಬಳ್ಳ
ನಾಗಮಂಗಲ: ವೇದಿಕೆ ಕಾರ್ಯಕ್ರಮ ಮುಗಿದ ನಂತರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀಗುರು ಭೈರವೈಕ್ಯ ಮಂದಿರದ ದರ್ಶನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಬಿಸಿಲನ್ನು ಲೆಕ್ಕಿಸದೆ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದರಿಂದ ಪೊಲೀಸರು ಹಾಗೂ ಮಠದ ಸಿಬ್ಬಂದಿ ಅವರನ್ನು ಸಾಲಿನಲ್ಲಿ ದರ್ಶನಕ್ಕೆ ಕಳುಹಿಸಲು ಹರಸಾಹಸಪಡಬೇಕಾಯಿತು. ಪ್ರಧಾನಿ ಮೋದಿ ಅವರು ನಿರ್ಗಮಿಸಿದ ನಂತರ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀಗುರುಭೈರವೈಕ್ಯ ಮಂದಿರದಲ್ಲಿ ಭಕ್ತರಿಗೆ ಆಶೀರ್ವಾದ ನೀಡಿದರು.
ಲಕ್ಷಕ್ಕೂ ಹೆಚ್ಚು ಜನ ಭಾಗಿ: ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ಬೆಳಗಾವಿ, ತುಮಕೂರು, ವಿಜಯಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಿಳೆಯರು, ವಿದ್ಯಾರ್ಥಿಗಳು, ವೃದ್ದರು ಆಗಮಿಸಿದ್ದರು..