ಕದಲೂರು ಗ್ರಾಮದಲ್ಲಿ ಗ್ರಾಮದಿಂದ ಸೋಮನಹಳ್ಳಿ ಗ್ರಾಮದ ರೈಲ್ವೆ ಮಾರ್ಗದವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 1.30 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆಯನ್ನು ನೆರವೇರಿಸಿದರು. ಕದಲೂರು ರಾಮಕೃಷ್ಣ, ತಿಮ್ಮೇಗೌಡ, ಕೆ.ಆರ್.ಮಹೇಶ್, ಸತೀಶ್ಇದ್ದರು. 
ಮಂಡ್ಯ

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ

ಎಂ.ರವಿ
ಮದ್ದೂರು: ತಾಲೂಕಿನ ಕೆಲವು ಕಡೆಗಳಲ್ಲಿ ಹಾದು ಹೋಗುವ ರೈಲ್ವೆ ಮಾರ್ಗದ ಮೇಲೆ ಮೇಲ್ಸೇತುವೆ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಮಾತನಾಡಿ ಕ್ರಮ ವಹಿಸುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಕದಲೂರು ಗ್ರಾಮದಲ್ಲಿ ಗ್ರಾಮದಿಂದ ಸೋಮನಹಳ್ಳಿ ಗ್ರಾಮದ ರೈಲ್ವೆ ಮಾರ್ಗದವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 1.30 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶನಿವಾರ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದರು.
ನಗರದ ಸಾರಿಗೆ ಡಿಪೋ ರಸ್ತೆಯ ಬಳಿ, ಚನ್ನೇಗೌಡನದೊಡ್ಡಿ ಬಳಿ, ತಾಲೂಕಿನ ಸೋಮನಹಳ್ಳಿ, ಕದಲೂರು ಬಳಿ ಸೇರಿದಂತೆ ಕೆಲವು ಕಡೆಗಳಲ್ಲಿ ರೈಲ್ವೆ ಮೇಲ್ಸೇತುವೆಯ ಅವಶ್ಯಕತೆ ಇದ್ದು, ಇದು ಆದರೆ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತುಂಬ ಅನುಕೂಲವಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ ಸೋಮಣ್ಣರೊಂದಿಗೆ ಚರ್ಚಿಸಿ ಮನವರಿಕೆ ಮಾಡಿಕೊಡುತ್ತೇನೆ ಎಂದರು.
ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಗ್ರಾಪಂ ಮಾಜಿ ಅಧ್ಯಕ್ಷ ತಿಮ್ಮೆಗೌಡ, ಮುಖಂಡರಾದ ಕೆ.ಆರ್.ಮಹೇಶ್, ಸತೀಶ್ ಸೇರಿದಂತೆ ಹಲವರು ಹಾಜರಿದ್ದರು.