ಕೆ.ಎಂ.ದೊಡ್ಡಿಯ ಬಾಲಾಜಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಕುಂದು-ಕೊರತೆ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು.
ಕೆ.ಎಂ.ದೊಡ್ಡಿ: ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧರಾಗುವಂತೆ ಶಾಸಕ ಕೆ.ಎಂ.ಉದಯ್ ಕಾರ್ಯಕರ್ತರಿಗೆ ಹೇಳಿದರು.
ಕೆ.ಎಂ.ದೊಡ್ಡಿಯ ಖಾಸಗಿ ಸಮುದಾಯ ಭವನ ಹಾಗೂ ಅಣ್ಣೂರು ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಬೂತ್ ಮಟ್ಟದಿಂದ ಬಲಿಷ್ಠವಾಗಿಸಬೇಕು. ಪ್ರತಿ ಗ್ರಾಮದಲ್ಲಿ 20 ಸದಸ್ಯರ ಬೂತ್ ಸಮಿತಿ ಹಾಗೂ 3 ರಿಂದ 4 ಪ್ರಮುಖ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ. ಸಮಿತಿಯ ಸದಸ್ಯರು ಮುಂಚೂಣಿಯಲ್ಲಿದ್ದು ಪಕ್ಷ, ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಗ್ರಾಮದ ಅಭಿವೃದ್ಧಿ ಹಾಗೂ ಪಕ್ಷದ ಹಿತದೃಷ್ಟಿಯಿಂದ ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು ವಿಶ್ವಾಸದಿಂದ ಪಕ್ಷದ ಕೆಲಸ ಮಾಡಬೇಕು. ಡಿ.ಕೆ.ಶಿವಕುಮಾರ್ ಅವರು ಯುವ ಶಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಭಾರತ್ ಜೋಡೋ’ ಹೆಸರಿನಲ್ಲಿ ಯುವಕರ ಸಂಘಗಳ ರಚನೆಗೆ ಮುಂದಾಗಿದ್ದಾರೆ. ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು ತಲಾ 6 ಸದಸ್ಯರ ಒಳಗೊಂಡ ಸಮಿತಿ ರಚಿಸಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಸಮರ್ಪಕವಾಗಿ ತಲುಪಿಸಲು ಸಹಕಾರಿಯಾಗುತ್ತದೆ ಎಂದರು.
ನನ್ನನ್ನು ಭೇಟಿಯಾಗಲು ಬರುವವರು ಹಾರ-ತುರಾಯಿಗಳನ್ನು ತರಬೇಡಿ. ಗ್ರಾಮಗಳಿಗೆ ಭೇಟಿ ನೀಡಿದಾಗ, ಸಭೆ ಸಮಾರಂಭಗಳಲ್ಲಿ ಪಟಾಕಿ ಸಿಡಿಸಬೇಡಿ ಎಂದು ಮನವಿ ಮಾಡಿದರು.
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಯಿತು.
ಮನ್ಮುಲ್ ನಿರ್ದೇಶಕ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಗ್ರಾಪಂ ಮಾಜಿ ಅಧ್ಯಕ ್ಷಮರಿಚನ್ನೇಗೌಡ, ಶೇಖರ್, ವರದರಾಜು, ಜಯರಾಮು, ಚಂದ್ರಶೇಖರ್, ವರದರಾಜು, ಮಂಜು, ತಮ್ಮಣ್ಣ, ಎ.ಬಿ.ಹಳ್ಳಿ ಅಕ್ಕಿಸ್ವಾಮಿ, ಪ್ರಸನ್ನ, ಸತೀಶ್, ರಾಘವೇಂದ್ರ, ಸಚಿನ್, ಎಂ.ಪಿ.ರವಿಚಂದ್ರ, ಕೆ.ಟಿ.ಶ್ರೀನಿವಾಸ್, ಪುಟ್ಟರಾಮು, ಮಾಜಿ ಸದಸ್ಯ ಚಂದ್ರಶೇಖರ್, ಮುಖಂಡರಾದ ಆನಂದ್, ಮನೋಹರ್, ಕೆ.ಟಿ.ಶ್ರೀನಿವಾಸ್, ಪುಟ್ಟರಾಮು, ಕೆ.ಕಬ್ಬಾಳಯ್ಯ, ಮಹೇಶ್, ಕೆ.ಪಿ.ದೊಡ್ಡಿ ಸಿದ್ದರಾಜು, ಮಣಿಗೆರೆ ಪ್ರಕಾಶ್ ಉಪಸ್ಥಿತರಿದ್ದರು.