ಮದ್ದೂರು ತಾಲೂಕಿನ ಶಿವಪುರ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಚುಂಚಶ್ರೀ ಗೆಳೆಯರ ಬಳಗ, ಶ್ರೀ ನಾಡಪ್ರಭು ಕೆಂಪೇಗೌಡರ ಬಳಗದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಬಿ.ಜಿ.ಎಸ್.ಶಿಕ್ಷಣ ಸೇವಾ ಶ್ರೀ ರತ್ನ ಪ್ರಶಸ್ತಿಯನ್ನು ಮೈಸೂರು ವಿವಿ ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡರಿ ಹಾಗೂ ಹೃದಯ ರೋಗ ತಜ್ಞ ಡಾ.ಎಸ್.ಎಸ್.ಯೋಗಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಕೆ.ಎಂ.ಉದಯ್, ಡಾ.ಬಿ.ಕೃಷ್ಣ, ವಿ.ಟಿ.ರವಿಕುಮಾರ್, ಎಸ್.ವಿ.ರಮೇಶ್, ಪಿ.ಕಸ್ತೂರಿ, ಎಚ್.ಆರ್.ಅನಂತೇಗೌಡ, ಸಿ.ಅಪೂರ್ವಚಂದ್ರ ಇದ್ದರು. 
ಮಂಡ್ಯ

ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ತ್ರಿವಿಧ ದಾಸೋಹಿ

ಶಾಸಕ ಕೆ.ಎಂ.ಉದಯ್ ಬಣ್ಣನೆ ಶಿಕ್ಷಣ ಶ್ರೀ ಸೇವಾ ರತ್ನ ಪ್ರಶಸ್ತಿ ಪ್ರದಾನ

ಮದ್ದೂರು: ತ್ರಿವಿಧ ದಾಸೋಹ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ದಾರಿ ದೀಪವಾಗಿದ್ದರು ಎಂದು ಶಾಸಕ ಕೆ.ಎಂ.ಉದಯ್ ಪ್ರಶಂಸೆ ವ್ಯಕ್ತಪಡಿಸಿದರು.
ಶಿವಪುರ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಚುಂಚಶ್ರೀ ಗೆಳೆಯರ ಬಳಗ, ಶ್ರೀ ನಾಡಪ್ರಭು ಕೆಂಪೇಗೌಡರ ಬಳಗದ ವತಿಯಿಂದ ವತಿಯಿಂದ ಭಾನುವಾರ ಆಯೋಜಿಸಿದ್ದ ಬಿಜಿಎಸ್.ಶಿಕ್ಷಣ ಶ್ರೀ ಸೇವಾ ರತ್ನ ಪ್ರಶಸ್ತಿ ಪ್ರದಾನ-2026 ಸಮಾರಂಭ ಉದ್ಘಾಟಿಸಿ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಬಡ ಜನರ ಸೇವೆಯನ್ನು ನಿರಂತರವಾಗಿ ಮಾಡಿದರು. ರಾಜ್ಯ ಸೇರಿದಂತೆ ದೇಶ-ವಿದೇಶಗಳಲ್ಲಿ ಮಠಗಳನ್ನು ಸ್ಥಾಪಿಸಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.
ಚುಂಚಶ್ರೀ ಗೆಳೆಯಬರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣೆ ಅಂಗವಾಗಿ ಚುಂಚಶ್ರೀ ಗೆಳೆಯರ ಬಳಗ ವತಿಯಿಂದ ಅವರ ಸ್ಮರಣೆ ಕಾರ್ಯಕ್ರಮವನ್ನು ಪ್ರತಿವರ್ಷ ಆಯೋಜಿಕೊಂಡು ಬರಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜಿಎಸ್ ಶಿಕ್ಷಣ ಸೇವಾ ಶ್ರೀ ರತ್ನ ಪ್ರಶಸ್ತಿಯನ್ನು ಮೈಸೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡ ಹಾಗೂ ಖ್ಯಾತ ಹೃದಯ ರೋಗ ತಜ್ಞ ಡಾ.ಎಸ್.ಎಸ್.ಯೋಗಣ್ಣ ಅವರಿಗೆ ಪ್ರದಾನ ಮಾಡಿದರು.
ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಟಿ.ರವಿಕುಮಾರ್, ನಿವೃತ್ತ ಮುಖ್ಯ ಅಭಿಯಂತರ ಎಸ್.ವಿ.ರಮೇಶ್, ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ, ಚುಂಚಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ಎಚ್.ಆರ್.ಅನಂತೇಗೌಡ, ಕಾರ್ಯದರ್ಶಿ ವಿ.ಟಿ.ರವಿಕುಮಾರ್, ಪ್ರಧಾನ ಸಂಚಾಲಕರಾದ ಎಸ್.ಚಂದ್ರು, ಎಂ.ಎ.ಕೃಷ್ಣ, ಉಪಾಧ್ಯಕ್ಷ ಸಿ.ಎಸ್.ಶಂಕರಯ್ಯ, ಮಹಾ ಪೋಷಕ ಸಿ.ಕೆ.ರಾಮಕೃಷ್ಣ, ಪ್ರಧಾನ ಸಂಘಟಕರಾದ ಕೆ.ಶಿವಕುಮಾರ್, ಡಿ.ಪಿ.ಶಿವಪ್ಪ ಹಾಗೂ ಸಿ.ಅಪೂರ್ವಚಂದ್ರು, ಮಮತಾ ಶಂಕರೇಗೌಡ, ಸೇರಿದಂತೆ ಇತರರು ಇದ್ದರು.