ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
- ಮಾತೃಗೊಂದು ಮರ-ಸಹಸ್ರ ಸಹಸ್ರ ಗಿಡ ನೆಡುವ ಅಭಿಯಾನ
- ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ
ಮಂಡ್ಯ: ನಾಗಮಂಗಲ ತಾಲೂಕು ಪಡುವಲಪಟ್ಟಣ ಗ್ರಾಮದ ಕಾನನ ಬ್ರಹ್ಮದಲ್ಲಿ ಜು.12ರಂದು ಬೆಳಗ್ಗೆ 9.30ಕ್ಕೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾತೃಗೊಂದು ಮರ-ಸಹಸ್ರ ಸಹಸ್ರ ಗಿಡ ನೆಡುವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಆಗಮಿಸಲಿದ್ದಾರೆ. ಅವರಿಗೆ ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಕಾಪಾಡಬೇಕು. ಯಾವುದೇ ಲೋಪದೋಷವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಆ ದಿನದಂದು ವೇದಿಕೆಯ ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಕಾರ್ಯಕ್ರಮ ಕುರಿತು ಬ್ಯಾನರ್ ವ್ಯವಸ್ಥೆಯನ್ನು ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿ ಗೊಳಿಸಬೇಕು. ಭಾಗವಹಿಸುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.