ರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್‌ನಲ್ಲಿ ಮೂರು ಚಿನ್ನದ ಪದಕ ಪಡೆದ ಮುಳ್ಳೇರ ಪೊನ್ನಮ್ಮ ಪೂವಣ್ಣ.
ವಿರಾಜಪೇಟೆ: ಪಂಜಾಬ್‌ನ ಭಟಿಂಡಾದ ಗುರು ಕಾಶಿ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 45ನೇ ವೆಟರ್ನ್ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್‌ನಲ್ಲಿ 70 ವರ್ಷ ಮೇಲ್ಪಟ್ಟವರ ವಿಭಾಗದ ಚಾಂಪಿಯನ್‌ಷಿಪ್‌ನಲ್ಲಿ ಮುಳ್ಳೇರ ಪೊನ್ನಮ್ಮ ಪೂವಣ್ಣ ಭಾಗವಹಿಸಿ 100 ಮೀಟರ್ ಓಟ, ಶಾಟ್‌ಪಟ್ ಮತ್ತು ಜಾವೆಲಿನ್ ಎಸೆತಗಳಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕ ಪಡೆಯುದರೊಂದಿಗೆ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿದ್ದಾರೆ. ಇವರು ಮೂಲತಃ ವಿರಾಜಪೇಟೆ ತಾಲೂಕಿನ ಮುಳ್ಳೇರ ಪೂವಣ್ಣ ಅವರ ಪತ್ನಿಯಾಗಿದ್ದು. ಬೆಳಗಾವಿಯ ಸೈನಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.