ಮಂಡ್ಯ ತಾಲೂಕು ಮಂಗಲ ಗ್ರಾಮದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಪಿಡಿಒ ಕೃಷ್ಣೇಗೌಡ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. 
ಮಂಡ್ಯ

ಡಿಜಿಟಲ್ ಬ್ಯಾಂಕಿಂಗ್‌ನ ಮಾಹಿತಿ ತಿಳಿದುಕೊಳ್ಳಲಿ: ಗ್ರಾಪಂ ಪಿಡಿಒ ಕೃಷ್ಣೇಗೌಡ ಕಿವಿಮಾತು

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಮಂಗಲ ಗ್ರಾಮದಲ್ಲಿ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜನೆ
  • ಯೂನಿಯನ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕಿ ನಮಿತಾ ಸೇರಿದಂತೆ ಹಲವರು ಭಾಗಿ
ಮಂಡ್ಯ: ಪ್ರತಿಯೊಬ್ಬರಿಗೂ ಡಿಜಿಟಲ್ ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಅರಿವು ಅಗತ್ಯ ಎಂದು ಮಂಗಲ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣೇಗೌಡ ಸಲಹೆ ನೀಡಿದರು.
ತಾಲೂಕಿನ ಮಂಗಲ ಗ್ರಾಮದಲ್ಲಿ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಯೋಜಿಸಿದ್ದ ಬ್ಯಾಂಕಿಂಗ್ ಬಗ್ಗೆ ಅರಿವು ಮತ್ತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನದಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದೆ. ಅದರಲ್ಲೂ ವಿದ್ಯಾವಂತರೇ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಮೋಸಕ್ಕೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಬ್ಯಾಂಕಿಂಗ್ ನಿರ್ವಹಣೆ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದರು.
ಯೂನಿಯನ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕಿ ನಮಿತಾ, ಕುಮಾರ್ ಇದ್ದರು. ಸಂಪನ್ಮೂಲ ವ್ಯಕ್ತಿ ವಿನೋದ್‌ಕುಮಾರ್ ಡಿಜಿಟಲ್ ಬ್ಯಾಂಕಿಂಗ್ ಕುರಿತು ಪ್ರಾತ್ಯಕ್ಷತೆ ಮೂಲಕ ತರಬೇತಿ ನೀಡಿದರು. ಆರ್ಥಿಕ ಸಮಾಲೋಚಕಿ ಕೆ.ಪಿ.ಅರುಣಕುಮಾರಿ ಅವರು ಸೈಬರ್ ವಂಚನೆ ಹಾಗೂ ಸಹಾಯವಾಣಿ ಕುರಿತು ಮಾಹಿತಿ ಹಂಚಿಕೊಂಡರು. ಬ್ಯಾಂಕ್ ಆಫ್ ಬರೋಡ ಸ್ವಉದ್ಯೋಗ ತರಬೇತಿ ಸಂಸ್ಥೆಯ ಪ್ರಸನ್ನಕುಮಾರ್ ಅವರು ಮಹಿಳೆಯರಿಗಾಗಿ ಇರುವ ಉಚಿತ ಸವಲತ್ತು ತರಬೇತಿ ಕುರಿತು ವಿವರಿಸಿದರು. ನಂತರ ಮಹಿಳೆಯರೊಂದಿಗೆ ಸಂವಾದ ನಡೆಯಿತು.