ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರು ಜಖಂಗೊಂಡಿರುವುದು. 
ಮಂಡ್ಯ

ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ನಾಗಮಂಗಲ: ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟಿದ್ದಾರೆ. ತಾಲೂಕಿನ ದೇವಲಾಪುರ ಹೋಬಳಿಯ ಕಸಲಗೆರೆ ಗ್ರಾಮದ ಗಂಗರಾಜು(61) ಮತ್ತು ಇದೇ ಗ್ರಾಮದ ಕೆ.ಎ.ಜಯಶಂಕರ (33) ಮೃತರು.
ಶನಿವಾರ ಬೆಳ್ಳೂರು ಕಡೆಯಿಂದ ವೇಗವಾಗಿ ಬಂದ ಕಾರು ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡಲು ನಾಗಮಂಗಲದಿಂದ ಬೆಳ್ಳೂರು ಕಡೆಗೆ ಎದುರಿನಿಂದ ಬೈಕ್‌ನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಕುಳಿತ್ತಿದ್ದ ಇಬ್ಬರೂ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಸ್ಥಳೀಯರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆಂದು ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದು, ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಶವಗಾರದಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.