ಯುಗಾದಿ ಅಮಾವಾಸ್ಯೆ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿರುವುದು. 
ಮಂಡ್ಯ

ಮದ್ದೂರಿನ ದೇವಾಲಯಗಳಲ್ಲಿ ಯುಗಾದಿ ಪೂಜೆ

ಪ್ರಮುಖ ಮುಖ್ಯಾಂಶಗಳು

  • ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಿ ಆರಾಧನೆ
ಮದ್ದೂರು: ಯುಗಾದಿ ಅಮಾವಾಸ್ಯೆ ಹಾಗೂ ಹೊಸ ವರ್ಷದ ಅಂಗವಾಗಿ ಗುರುವಾರ ನಗರ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.
ನಗರದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ, ಶ್ರೀ ಉಗ್ರ ನರಸಿಂಹಸ್ವಾಮಿ, ಶ್ರೀ ವರದರಾಜಸ್ವಾಮಿ, ಶ್ರೀ ಹೊಳೆ ಆಂಜನೇಯಸ್ವಾಮಿ, ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ಹಾಗೂ ತಾಲೂಕಿನ ವೈದ್ಯನಾಥಪುರ ಗ್ರಾಮದ ಶ್ರೀ ವೈದ್ಯನಾಥೇಶ್ವರಸ್ವಾಮಿ, ಚಿಕ್ಕಂಕನಹಳ್ಳಿ ಗ್ರಾಮದ ಶ್ರೀ ನಂದಿಬಸವೇಶ್ವರಸ್ವಾಮಿ, ಆಬಲವಾಡಿ ಗ್ರಾಮದ ಶ್ರೀ ತೋಪಿನ ತಿಮ್ಮಪ್ಪ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಹಲವು ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು.
ಭಕ್ತರಿಗೆ ಮುಂಜಾನೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.