ಶ್ರೀ ಕದಲೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ವೈಕುಂಠ ದ್ವಾರದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಕೆ.ಟಿ.ಶಿವರಾಮ್, ನಾಗೇಶ್, ನಂದೀಶ್‌ಗೌಡ್ರು, ಮಧು ಇದ್ದರು. 
ಮಂಡ್ಯ

ಕದಲೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಮದ್ದೂರು: ತಾಲೂಕಿನ ಕದಲೀಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕದಲೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಮಹೋತ್ಸವ ಅಂಗವಾಗಿ ಮಂಗಳವಾರ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾತಃಕಾಲ ಮಹಾಭಿಷೇಕ, ಬೆಳಗ್ಗೆ 5.30 ಗಂಟೆಗೆ ಮಹಾಮಂಗಳಾರತಿ, ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ವೈಕುಂಠ ದ್ವಾರದರ್ಶನದ ವ್ಯವಸ್ಥೆ ಮಾಡಲಾಗಿತ್ತು. ನಂತರ ಸಹಸ್ರಾರು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ತೀರ್ಥ, ಪ್ರಸಾದ ಸ್ವೀಕಾರ ಮಾಡಿದರು.
ಟ್ರಸ್ಟ್ ಅಧ್ಯಕ್ಷ ಕೆ.ಟಿ.ಶಿವರಾಮ್ ಶಿವರಾಮ್ ಮಾತನಾಡಿ, ವೈಕುಂಠ ಏಕಾದಶಿ ಅಂಗವಾಗಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಕದಲೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಅತ್ಯಂತ ಶಕ್ತಿಶಾಲಿ ದೇವರು ಎಂದರು. ಟ್ರಸ್ಟ್ ಅಧ್ಯಕ್ಷ ಕೆ.ಟಿ.ಶಿವರಾಮ್, ಪ್ರಧಾನ ಅರ್ಚಕ ನಾರಾಯಣ್ ಅಯ್ಯಂಗಾರ್, ಮುಖಂಡರಾದ ನಾಗೇಶ್, ನಂದೀಶ್‌ಗೌಡ್ರು, ಉಮೇಶ್, ಮಧುಸೂದನ್, ರಾಜಣ್ಣ ಸೇರಿದಂತೆ ಇತರರು ಇದ್ದರು.