ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಶಾಸಕ ಕೆ.ಎಂ.ಉದಯ್ ಗೊರವನಹಳ್ಳಿಗೆ ಭೂಮಿಪೂಜೆ ನೆರವೇರಿಸಲು ಬಂದ ವೇಳೆಯೇ ಗ್ರಾಮದ ಕೆಲವು ಗ್ರಾಮಸ್ಥರು ಮದ್ದೂರು ನಗರಸಭೆಗೆ ಗೊರವನಹಳ್ಳಿಯನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಬೇಡವೇ ಬೇಡ ನಗರಸಭೆ ಬೇಡ ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಶನಿವಾರ ಶಾಸಕ ಕೆ.ಎಂ.ಉದಯ್ ಗೊರವನಹಳ್ಳಿಗೆ ಭೂಮಿ ಪೂಜೆ ನೆರವೇರಿಸಲು ಬಂದ ವೇಳೆಯೇ ಗ್ರಾಮದ ಕೆಲವು ಗ್ರಾಮಸ್ಥರು ಮದ್ದೂರು ನಗರಸಭೆಗೆ ಗೊರವನಹಳ್ಳಿಯನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಬೇಡವೇ ಬೇಡ ನಗರಸಭೆ ಬೇಡ ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಈ ವೇಳೆ ಒಂದೇ ಸ್ಥಳದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ಹಾಗೂ ಗೊರವನಹಳ್ಳಿಯನ್ನು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಪಿಐಗಳಾದ ನವೀನ್‌ಕುಮಾರ್ ಹಾಗೂ ನಾರಾಯಣಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ನಿಯೋಜಿಸಲಾಗಿತ್ತು. ನಂತರ ವೇದಿಕೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು.