ಮಂಡ್ಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಪ್ರತಿಜ್ಞಾವಿಧಿ ಭೋದಿಸಿದರು.  
ಮಂಡ್ಯ

ಮತದಾನದ ಘನತೆ ಎತ್ತಿ ಹಿಡಿಯೋಣ: ಜಿಲ್ಲಾಧಿಕಾರಿ ಡಾ.ಕುಮಾರ ಕರೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಮತದಾರರ ದಿನಾಚರಣೆ
  • ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಣೆ
  • ನೆರೆದಿದ್ದವರಿಂದ ಪ್ರತಿಜ್ಞಾ ವಿಧಿ ಸ್ವೀಕಾರ
ಮಂಡ್ಯ: ಚುನಾವಣೆಯನ್ನು ಅತ್ಯಂತ ನಿಷ್ಪಕ್ಷಪಾತ, ಪಾರದರ್ಶಕವಾಗಿ ಮಾಡುವ ನಿಟ್ಟಿನಲ್ಲಿ ಆಯೋಗವನ್ನು ಸ್ಥಾಪಿಸಲಾಯಿತು. ಅದರಂತೆ ಚುನಾವಣೆಯ ಘನತೆ, ಗೌರವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತದಾರರ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷವೂ ಸಹ ಮತದಾನದ ದಿನವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಇದರ ಉದ್ದೇಶ ಪ್ರಬುದ್ಧ ಮತದಾರರು ಪ್ರಜ್ಞಾವಂತರನ್ನಾಗಿಸುವುದಾಗಿದಾಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿರುವುದರಿಂದ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಪ್ರತಿಯೊಬ್ಬರೂ ಸಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಇತರರಿದ್ದರು.