ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಅಧ್ಯಕ್ಷ ಚನ್ನಯ್ಯ, ಪ್ರಧಾನ ಕಾರ್ಯದರ್ಶಿ ವಿನಯ್ ಕೆ., ಉಪಾಧ್ಯಕ್ಷ ಚನ್ನೇಗೌಡ, ಈರೇಗೌಡ, ಖಜಾಂಚಿ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಮಾಜಿ ನಿರ್ದೇಶಕ ಎಂ.ಲೋಕೇಶ್ ಇದ್ದರು 
ಮಂಡ್ಯ

ಛಲವಿದ್ದರೆ ಸಾಧನೆ ಹಾದಿ ಸುಲಭ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ಸಹ ಪ್ರಾಧ್ಯಾಪಕರು ಎ.ಎಚ್. ಗೋಪಾಲ್ ಅಭಿಮತ

ಶ್ರೀರಂಗಪಟ್ಟಣ:

ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮತ್ತು ಸರಿಯಾದ ಗುರಿ ಹಾಗೂ ಗುರುವಿನ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ಬಿಜಿಎಸ್ ಶಿಕ್ಷಣ ಮಹಾ ವಿದ್ಯಾಲಯದ ಸಹ ಪ್ರಾಧ್ಯಾಪಕರು ಎ.ಎಚ್. ಗೋಪಾಲ್ ಹೇಳಿದರು.

ಪಟ್ಟಣದ ತಾಲೂಕು ಕುರುಬರ ಸಂಘದಿಂದ ಭಾನುವಾರ ಆಯೋಜಿಸಿದ್ದ ಎಸ್ ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು.
ವಿದ್ಯೆ ಸಾಧಕನ ಸ್ವತ್ತೇ ಹೊರತು, ಸೋಮಾರಿಯ ಸ್ವತ್ತಲ್ಲ. ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂಬ ಹಠ, ಛಲ ಬೆಳೆಸಿಕೊಳ್ಳಬೇಕು. ಸಾಧಿಸುವ ಛಲವಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಪ್ರತಿಭೆ ಜತೆ ಸೃಜನಶೀಲತೆ, ಪರಿಶ್ರಮ, ಶಿಸ್ತುಬದ್ಧ ಗುರಿ ಹೊಂದಬೇಕು ಎಂದರು.
ಪ್ರಸ್ತುತ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ಹೇಗಾಗಿದರೆ ಮೌಲ್ಯಗಳು ಕುಸಿದಿದೆ, ಗುಣಮಟ್ಟವಿಲ್ಲದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಶೇ.99ರಷ್ಟು ಅಂಕಗಳಿಸಿದರೂ ಸಹ ದಿನಪತ್ರಿಕೆ ಓದಲು ಬರುತ್ತಿಲ್ಲ. ಅಂತಹ ಶಿಕ್ಷಣ ಬದಲಿಗೆ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ, ಗುರಿಯ ಕಡೆಗೆ ತುಡಿತ ಇರಬೇಕು. ಸಾಧನೆಯ ಬಗ್ಗೆ ಕನಸ್ಸು ಕಾಣಬೇಕು ಎಂದರು.
ಕುರುಬರ ಸಂಘದ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಇದೇ ಮೊದಲ ಬಾರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಮುನ್ನಡೆಯಬೇಕು ಎಂದರು.
ಎಸ್‌ಎಸ್‌ಎಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಶೇ.80 ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಧಾನ ಕಾರ್ಯದರ್ಶಿ ವಿನಯ್ ಕೆ., ಉಪಾಧ್ಯಕ್ಷ ಚನ್ನೇಗೌಡ, ಈರೇಗೌಡ, ಖಜಾಂಚಿ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಮಾಜಿ ನಿರ್ದೇಶಕ ಎಂ.ಲೋಕೇಶ್, ಶಿವಮಲ್ಲು ಇತರರಿದ್ದರು.
.