ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆಯ ಅಂಗವಾಗಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.ಡಾ.ಇಂದ್ರಾಣಿ, ಡಾ.ಜಿ.ಅಜಿತ್, ಡಾ.ಸುಪ್ರೀತ್, ಡಾ.ಕೋಮಲಾ, ಡಾ. ಪುಟ್ಟಸ್ವಾಮಿ ಇದ್ದರು. 
ಮಂಡ್ಯ

ಗಂಜಿಗೆರೆಯಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಕೆ.ಆರ್.ಪೇಟೆ : ತಾಲೂಕಿನ ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆಯ ಅಂಗವಾಗಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.
ದಂತ ಆರೋಗ್ಯದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಗಂಜಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಬಾಯಿ ಮತ್ತು ಹಲ್ಲುಗಳ ತಪಾಸಣೆ ನಡೆಸಿ, ಅಗತ್ಯವಿದ್ದವರಿಗೆ ಹಲ್ಲು ಕೀಳುವುದು, ಹಲ್ಲು ಸ್ವಚ್ಛಗೊಳಿಸುವುದು ಹಾಗೂ ಸಿಮೆಂಟ್ ತುಂಬುವ ಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಬಾಯಿ ಕ್ಯಾನ್ಸರ್ ಹರಡುವಿಕೆ ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ವೈದ್ಯರು ಜನರಿಗೆ ಜಾಗೃತಿ ಮೂಡಿಸಿದರು.
ಜಿಲ್ಲಾ ದಂತ ನೋಡಲ್ ಅಧಿಕಾರಿಗಳಾದ ಡಾ.ಇಂದ್ರಾಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಅಜಿತ್, ದಂತ ವೈದ್ಯರಾದ ಡಾ.ಸುಪ್ರೀತ್, ಡಾ.ಕೋಮಲಾ ಹಾಗೂ ಡಾ. ಪುಟ್ಟಸ್ವಾಮಿ, ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.