ಮದ್ದೂರು: ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲೇ ನಾಡು, ನುಡಿ ಹಾಗೂ ದೇಶಪ್ರೇಮ ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸನ್ ರೈಸ್ ಕಾನ್ವೆಂಟ್ನ ಕಾರ್ಯದರ್ಶಿ ಸಿ.ಟಿ.ಮಹೇಂದ್ರ ತಿಳಿಸಿದರು.
ನಗರದ ಸನ್ರೈನ್ಸ್ ಕಾನ್ವೆಂಟ್ನಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಂಕ್ಗಳಿಂದ ಸಿಗುವ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಪಾಲಕರಿಗೆ, ಗುರು, ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ರೂಡಿಸಿಕೊಳ್ಳಬೇಕು. ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಜೀವನದಲ್ಲಿ ಉನ್ನತ ಸ್ಥಾನಮಾನಗಳನ್ನು ಪಡೆದು ಪಾಲಕರಿಗೆ ಹಾಗೂ ಗುರುಗಳಿಗೆ ಕೀರ್ತಿ ತರಬೇಕೆಂದು ಕಿವಿಮಾತು ಹೇಳಿದರು.
ಸನ್ರೈಸ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಮಾನವೀಯ ಮೌಲ್ಯಗಳು ಸೇರಿದಂತೆ ವಿದ್ಯಾರ್ಥಿಗಳ ಸಮಗ್ರ ಮನೋವಿಕಾಸನಕ್ಕೆ ಒತ್ತು ನೀಡುತ್ತಿದೆ ಎಂದರು.
ಮಂಡ್ಯದ ಎಸ್ಬಿಐ ಲ್ೈ ವ್ಯವಸ್ಥಾಪಕ ಭೀಮಶಂಕರ್ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲ್ಲೇ ಬ್ಯಾಂಕ್ಗಳಲ್ಲಿ ನಡೆಯುವ ವ್ಯವಹಾರಗಳ ಬಗ್ಗೆ ತಿಳಿದುಕೊಂಡರೆ ಮುಂದೆ ನಿಮಗೆ ಅನುಕೂಲವಾಗುತ್ತದೆ ಎಂಬ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವೇಷಭೂಷಣ ಎಲ್ಲರ ಗಮನ ಸೆಳೆಯಿತು.
ಸಂಸ್ಥೆಯ ಅಧ್ಯಕ್ಷ ರಾಜೀವ್, ಮುಖ್ಯ ಶಿಕ್ಷಕಿ ಎಸ್.ಸುಮಾ, ಮಂಡ್ಯದ ಎಸ್ಬಿಐ ಲೈಪ್ ಯೂನಿಟ್ ಮ್ಯಾನೇಜರ್ ಹೇಮಂತ್, ಶಿಕ್ಷಕರಾದ ಜಬೀನ್ತಾಜ್, ಶಿವಶಂಕರ್, ಜ್ಯೋತಿ, ವಿದ್ಯಾ, ರಮ್ಯಾ, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.