ನಾಗಮಂಗಲ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಸಸಿ ನೆಟ್ಟು ನೀರೆರೆಯುವ ಮೂಲಕ ತಾಯಿ ಹೆಸರಿನಲ್ಲಿ ಒಂದು ಗಿಡ ರಾಷ್ಟ್ರೀಯ ವೃಕ್ಷಾರೋಹಣ ಅಭಿಯಾನಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.  
ಮಂಡ್ಯ

ಪರಿಸರ ರಕ್ಷಿಸಲು ಎಲ್ಲರೂ ಕೈಜೋಡಿಸಿ

Let everyone join hands to protect the environment.

ನಾಗಮಂಗಲ: ಜನ್ಮ ಕೊಟ್ಟ ತಾಯಿ ಮತ್ತು ಭೂತಾಯಿ ಹೆಸರಿನಲ್ಲಿ ಪ್ರತಿಯೊಬ್ಬರೂ ಕೂಡ ಕನಿಷ್ಠ ಒಂದು ಸಸಿ ನೆಟ್ಟು ಬೆಳೆಸಿದರೆ ಹಸಿರು ಕಾನನ ನಿರ್ಮಿಸಬಹುದು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಪುರಸಭೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಏಕ್ ಪೇಡ್ ಮಾ ಕೆ ನಾಮ್ (ತಾಯಿ ಹೆಸರಿನಲ್ಲಿ ಒಂದು ಗಿಡ) ಘೋಷವಾಕ್ಯದ ರಾಷ್ಟ್ರೀಯ ವೃಕ್ಷಾರೋಹಣ ಅಭಿಯಾನಕ್ಕೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರಕೃತಿ ಸುರಕ್ಷಿತವಾಗಿದ್ದರೆ ನಾವೂ ಕೂಡ ಸುರಕ್ಷಿತವಾಗಿರುತ್ತೇವೆ. ಹಾಗಾಗಿ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಗಿಡಮರಗಳನ್ನು ಬೆಳೆಸುವ ಕೆಲಸವಾಗಬೇಕು. ಏಕ್ ಪೇಡ್ ಮಾ ಕೆ ನಾಮ್ ಎನ್ನುವುದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಹಾಗೂ ಪರಿಸರ ಉಪಕ್ರಮಗಳಡಿ ತಾಯಿ ಹೆಸರಿನಲ್ಲಿ ಒಂದು ಸಸಿ ನೆಟ್ಟು ಪೋಷಿಸುವ ರಾಷ್ಟ್ರೀಯ ಅಭಿಯಾನವಾಗಿದೆ ಎಂದರು.

ಜನ್ಮ ಕೊಟ್ಟ ತಾಯಿಯನ್ನು ನಾವು ಎಷ್ಟು ಗೌರವಿಸುತ್ತೇವೆಯೋ ಪರಿಸರವನ್ನೂ ಕೂಡ ಅಷ್ಟೇ ಗೌರವಿಸಬೇಕು. ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿ ಆವರಣಗಳಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಸಿದರೆ ಸುಂದರ ಪರಿಸರದ ನಡುವೆ ಆರೋಗ್ಯವಂತ ಜೀವನ ನಡೆಸಬಹುದಾಗಿದೆ ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ವೀಣಾ, ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಎಚ್.ಎಂ.ಶಿವಕುಮಾರ್ ಸೇರಿದಂತೆ ಹಲವರಿದ್ದರು.

------

04 ಎನ್ಎಂಜಿ 01 :