ಹಲಗೂರು: ಹಲಗೂರು ಕೆರೆಯ ಏರಿಯ ಮೇಲೆ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಹಲಗೂರು ಸಮೀಪದ ಬಾಣಸಮುದ್ರ ಗ್ರಾಮದ ಲೋಕೇಶ್ ಅವರ ಪುತ್ರ ಮನೋಜ್ (20) ಮೃತ ಯುವಕ.
ಕಾರ್ಯ ನಿಮಿತ್ತ ಸ್ವಗ್ರಾಮದಿಂದ ಹಲಗೂರಿಗೆ ತೆರಳುತ್ತಿದ್ದಾಗ, ಹಲಗೂರು ಕಡೆಯಿಂದ ಮಳವಳ್ಳಿ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮನೋಜ್ ಸ್ಥಳದಲ್ಲೇ ಮೃತಪಟ್ಟರು. ಬೈಕ್ ಹಿಂಬದಿಯ ಸವಾರರಾದ ಬಾಣಸಮುದ್ರ ಗ್ರಾಮದ ಭರತ್, ತಾಳೆಹಳ್ಳ ಗ್ರಾಮದ ಡಿ.ಗೋವಿಂದರಾಜು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.