ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭವನದಲ್ಲಿ ಗುರುವಾರ ವಿವಿಧ ಸಂಘಗಳ ಸಹಕಾರದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ಅವರನ್ನು ಗೌರವಿಸಲಾಯಿತು. ಎಂ.ಬಿ. ಹರೀಶ್, ಸುರೇಶ್, ಡಾಲು ರವಿ, ಶೀಳನೆರೆ ಅಂಬರೀಶ್, ಕೆ.ವೈ. ಹರೀಶ್, ವನಜಾಕ್ಷಿ ಇತರರಿದ್ದರು. 
ಮಂಡ್ಯ

ಸಹಕಾರ ಕ್ಷೇತ್ರದಿಂದ ಗ್ರಾಮೀಣ ಜನರ ಆರ್ಥಿಕಾಭಿವೃದ್ಧಿ

ಸಚಿನ್ ಚಲುವರಾಯಸ್ವಾಮಿ ಅಭಿಮತ

ಕಿಕ್ಕೇರಿ: ಸಹಕಾರ ಕ್ಷೇತ್ರ ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ತಿಳಿಸಿದರು.

ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಂಡಳ, ಜಿಲ್ಲಾ ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಹಾಗೂ ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕೆ.ಆರ್.ಪೇಟೆ ತಾಲೂಕಿನ ಎಲ್ಲ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದರು.

ರೈತರು, ಹೈನುಗಾರರು ಹಾಗೂ ಸಾಮಾನ್ಯ ಜನರಿಗೆ ಸಹಕಾರ ಸಂಘಗಳು ಆರ್ಥಿಕ ಶಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಜತೆಗೆ ಬಡ್ಡಿರಹಿತ ಸಾಲ ನೀಡುತ್ತಿದೆ. ರೈತರು ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಸಕಾಲಕ್ಕೆ ಮರುಪಾವತಿ ಮಾಡಿ ಸಂಘದ ಅಭಿವೃದ್ಧಿ, ಆರ್ಥಿಕ ಸ್ಥರತೆ ಕಾಪಾಡಬೇಕು ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರವು ರೈತರ ಅನುಕೂಲಕ್ಕಾಗಿ ಪ್ರತಿ ಲೀಟರ್ ಹಾಲಿಗೆ 7ರೂ. ಹೆಚ್ಚಿಸಿದೆ. ಇದರಿಂದ ಹಾಲು ಉತ್ಪಾದಕ ಹೈನುಗಾರರಿಗೆ ಅನುಕೂಲವಾಗಲಿದೆ. ರೈತರು ವಿಚಲಿತರಾಗದೆ ರೈತರ ಅಭಿವೃದ್ಧಿಗಾಗಿ ಮೀಸಲಿರುವ ಸಹಕಾರ ಸಂಘದಲ್ಲಿ ದೊರೆಯುವ ಸವಲತ್ತು, ಸೌಲಭ್ಯ ಪಡೆಯಿರಿ. ರೈತರ ಬೆನ್ನೆಲುಬಾಗಿ ಎಲ್ಲರ ಸಹಕಾರದಿಂದ ಸಂಘವಿದೆ ಎಂಬುದನ್ನು ಅರಿಯಬೇಕು ಎಂದು ಕಿವಿಮಾತು ಹೇಳಿದರು.

ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್ ಮಾತನಾಡಿ, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ರೈತರ, ಆಡಳಿತ ಮಂಡಳಿಯವರ ಪರಿಶ್ರಮದಿಂದ ಸಮುದಾಯ ಭವನ, ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ. ಮುಂದಿನ ದಿನದಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿ ಮತ್ತಷ್ಟು ಸಂಘದ ಅಭಿವೃದ್ಧಿಗೆ ಮುಂದಾಗಿ ಎಂದು ನುಡಿದರು.

ಎಂ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ಮನ್‌ಮುಲ್ ನಿರ್ದೇಶಕ ಎಂ.ಬಿ. ಹರೀಶ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿರ್ದೇಶಕ ಎಸ್,ಎಲ್. ಮೋಹನ್ ಇತರರು ಸಹಕಾರ ಸಂಘದ ಮಹತ್ವ ಕುರಿತು ಮಾನಾಡಿದರು. ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ವೈ.ಹರೀಶ್, ಉಪಾಧ್ಯಕ್ಷ ಅಕ್ಷಯ್, ಮನ್‌ಮುಲ್ ಒಕ್ಕೂಟದ ಅಧ್ಯಕ್ಷ ಎಂ.ನಂದೀಶ್, ನಿರ್ದೇಶಕ ಡಾಲು ರವಿ, ಎಂಡಿಸಿಸಿ ಬ್ಯಾಂಕ್ ಸಿಇಒ ವನಜಾಕ್ಷಿ, ಜಿಲ್ಲಾ ಸಹಕಾರ ಸಂಘಗಳ ಉಪನಿರ್ದೇಶಕಿ ಶೀಲಾ, ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗಭೂಷಣ್, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಎಚ್.ಬಿ.ಭರತಕುಮಾರ್, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಕೆ.ಆರ್.ಪುಟ್ಟರಾಜು ಇತರರು ಇದ್ದರು.