ಮಂಡ್ಯ

ಹಣಕಾಸು ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ

ಬ್ಯಾಂಕ್ ಅಧಿಕಾರಿ ವಿಶಾಕ್ ಸಲಹೆ

ಬೆಟ್ಟದಪುರ: ಗ್ರಾಮೀಣ ಬ್ಯಾಂಕ್‌ಗಳು ಗ್ರಾಹಕರಿಗೆ ಒದಗಿಸುವ ವಿವಿಧ ಸೌಲಭ್ಯಗಳು ಹಾಗೂ ಸರ್ಕಾರದ ವಿಮಾ ಯೋಜನೆಗಳ ಕುರಿತು ಸಾರ್ವಜನಿಕರು ಅರಿವು ಹೊಂದಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಪ್ಪರದಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿ ವಿಶಾಕ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಹಣಕಾಸು ಸಾಕ್ಷರತಾ ಅಭಿಯಾನದಲ್ಲಿ ಮಾತನಾಡಿದ ಅವರು, ರೀ-ಕೆವೈಸಿ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ಬಿವೈ), ಅಟಲ್ ಪಿಂಚಣಿ ಯೋಜನೆ (ಎಪಿವೈ) ಸೇರಿದಂತೆ ಬ್ಯಾಂಕಿನ ವಿವಿಧ ಸೌಲಭ್ಯಗಳು ಹಾಗೂ ವಿಮಾ ಯೋಜನೆಗಳ ಬಗ್ಗೆ ತಿಳಿದುಕೊಂಡು, ಅವುಗಳನ್ನು ಸದುಪಯೋಗ ಪಡಿಸಿಕೊಂಡಿದ್ದೇ ಆದಲ್ಲಿ ಯೋಜನೆ ಜಾರಿಗೆ ತಂದದ್ದು ಪ್ರಯೋಜನಕ್ಕೆ ಬರುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ.ಶ್ರೀದೇವಿ, ಅಂಗನವಾಡಿ ಕಾರ್ಯಕರ್ತೆ ರತ್ನಾ, ಕ್ಲರ್ಕ್ ಜಿ.ಕೆ. ಮಹೇಂದ್ರ, ಸಿಬ್ಬಂದಿ ಪವಿತ್ರಾ, ಶಾಲಿನಿ, ಬ್ಯಾಂಕ್ ಗ್ರಾಹಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.