ಮದ್ದೂರು: ತಾಲೂಕಿನ ಹುಲಿಕೆರೆ ಗ್ರಾಮದ ರೈತರೊಬ್ಬರ ರೇಷ್ಮೆ ತೋಟದಲ್ಲಿ 5 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ. ರೈತರ ಮಾಹಿತಿ ಮೇರೆಗೆ ಸ್ಥಳ ಪರಿಶೀಲಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಶವ ಪರೀಕ್ಷೆ ವರದಿ ಬಂದ ನಂತರ ಏಕೆ ಮೃತಪಟ್ಟಿದೆ ಎಂಬುದು ಬಗ್ಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ. ನಗರದ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಸಂಸ್ಕಾರ ಮಾಡಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ತಾಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಸಹಾಯಕ ವಲಯ ಅರಣ್ಯಾಧಿಕಾರಿ ಕಾಂತರಾಜು, ಗಸ್ತು ಅರಣ್ಯ ಪಾಲಕರಾದ ವಿರೇಶ್‌ಅಂಗಡಿ, ಚಿನ್ನಪ್ಪ ಇದ್ದರು.