ಜಿಲ್ಲೆ

4ರಂದು ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಲೋಕಾರ್ಪಣೆ ಗೋಪಿನಾಥ್ ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ

ಮಂಗಳೂರು: ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಸೆ.4ರಂದು ಪುರಭವನದಲ್ಲಿ ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ ತಂಡದಿಂದ ಪ್ರಶಾಂತ್ ಸಿ.ಕೆ. ವಿರಚಿತ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಉದ್ಘಾಟನಾ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ತುಳು, ಕೊಂಕಣಿ, ಕನ್ನಡ, ತೆಲುಗು ಸಿನಿಮಾ, ರಂಗಭೂಮಿ ದಿಗ್ಗಜ ಕಲಾವಿದ ಗೋಪಿನಾಥ್ ಭಟ್ ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕುಂದೇಶ್ವರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.


ಗೋಪಿನಾಥ್ ಭಟ್ ಅವರು ರಂಗಭೂಮಿಯಲ್ಲಿ 100ಕ್ಕೂ ಹೆಚ್ಚು ಪಾತ್ರ ನಿರ್ವಹಿಸಿ 750ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದಾರೆ. ವೀರಮದಕರಿ ಸಹಿತ 45ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ದಟ್ಸ್ ಆಲ್ ಯುವರ್ ಆನರ್ ನಾಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಗೆದ್ದುಕೊಂಡಿರುವ ಭಟ್ ಅವರು ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿಗೂ ಭಾಜನರಾಗಿದ್ದಾರೆ.


ಸೆ.4ರಂದು ಸೋಮವಾರ ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸೆ.4ರಂದು ಸಂಜೆ 6 ಗಂಟೆಗೆ ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ನಿರ್ದೇಶನದಲ್ಲಿ ಪಾಡ್ದನ ಆಧರಿತ ತುಳು ನಾಟಕ ಮಣೆ ಮಂಚೊದ ಮಂತ್ರಮೂರ್ತಿ ಚೊಚ್ಚಲ ಪ್ರದರ್ಶನ ಆಯೋಜಿಸಲಾಗಿದ್ದು, ಇದೇ ಸಂದರ್ಭ ಹಿರಿಯ ದೈವಾರಾಧಕ ಸೀನ ಶೆಡ್ಯ ಅವರಿಗೆ ಗೌರವ ಸನ್ಮಾನ ನಡೆಯಲಿದೆ.