ಜಿಲ್ಲೆ

ಮಂಗಾಯಿ ದೇವಿ ಜಾತ್ರೆ ರದ್ದು

Belagavi

ಬೆಳಗಾವಿ: ವಡಗಾವಿಯಲ್ಲಿ ಜುಲೈ 14ರಿಂದ 18ರ ವರೆಗೆ ನಡೆಯಬೇಕಿದ್ದ ಗ್ರಾಮ ದೇವತೆ ಮಂಗಾಯಿದೇವಿ ಜಾತ್ರೆಯನ್ನು ಕರೊನಾ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಜಾತ್ರಾ ಸಂದರ್ಭದಲ್ಲಿ ಸಾವಿರಾರು ಭಕ್ತರು ಸೇರುವುದರಿಂದ ದೈಹಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಾಗುವುದಿಲ್ಲ. ಕೋವಿಡ್-19 ನಿಯಂತ್ರಣ ಸಲುವಾಗಿ ಜಾತ್ರೆ ರದ್ದು ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.