ಜಿಲ್ಲೆ

ಮಂಗಳೂರು 54.30 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್‌ನ 750 ಗ್ರಾಂ. ತೂಕದ 54,30,000 ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಶನಿವಾರ ದಮಾಮ್‌ನಿಂದ ವಿಮಾನದಲ್ಲಿ ಬಂದಿಳಿದ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಗುದನಾಳದಲ್ಲಿ 3 ಅಂಡಾಕಾರದ ವಸ್ತುಗಳು ಪತ್ತೆಯಾಗಿದ್ದು, ಅದರಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ. ಆತನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ಪ್ರಕರಣ ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.