ಮಂಗಳೂರು: ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಮಹೇಶ್ ಭಟ್ ಎಂಬವನನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಶಾಖೆ ಪೊಲೀಸ್ ಅಧೀಕ್ಷಕರಿಗೆ ಹಾಗೂ ಜಿಲ್ಲಾಧಿಕಾರಿ ಅವರಿಗೆ ಶನಿವಾರ ಮನವಿ ನೀಡಿ ಒತ್ತಾಯಿಸಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೂ ಮಹೇಶ್ ಭಟ್‌ನನ್ನು ಬಂಧಿಸದೇ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಆತನ್ನು ಬಂಧಿಸಿ, ಬಾಲಕಿಗೆ ನ್ಯಾಯ ಒದಗಿಸಿಕೊಡಬೇಕು. ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ನೊಂದ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿ ಆರೋಗ್ಯ ತಪಾಸಣೆ ನಡೆಸಿ ಪ್ರಜ್ಞಾ ಕೌನ್ಸಿಲ್ ವಶಕ್ಕೆ ಒಪ್ಪಿಸಿ ಹೆಚ್ಚಿನ ತನಿಖೆ ನಡೆಸಬೇಕು ಎಂದವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಎಸ್.ಪಿ.ಆನಂದ, ಅನಿಲ್ ಕುಮಾರ್, ವಿಷು ಕುಮಾರ್, ಸಿದ್ಧಪ್ಪ, ಆನಂದ್ ಮೊದಲಾದವರಿದ್ದರು.