ಮಂಗಳೂರು: ಕೊಂಪದವು ಗ್ರಾಮದ ನಾರಾಯಣ ಗೌಡ ಎಂಬವರು ಮಂಗಳವಾರ ಮರದ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 10 ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಅವರು ಗುಣಮುಖರಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮನೆಯವರು ಶಂಕಿಸಿದ್ದಾರೆ. ಅವರ ಪತ್ನಿ ನೀಡಿದ ದೂರಿನಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.