ಜಿಲ್ಲೆ

ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಹಾಸನ, ಸಕಲೇಶಪುರ ಸೇರಿದಂತೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಹಾಗೂ ಎಡಕುಮೇರಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಎಡಕುಮೇರಿ ಸಮೀಪದ ಕಡಗರವಳ್ಳಿ ಬಳಿ ರೈಲು ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

ಸುಬ್ರಹ್ಮಣ್ಯ ರೋಡು, ರೈಲು ನಿಲ್ದಾಣದಿಂದ ಮುಂದೆ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಶುಕ್ರವಾರ ಘಟನೆ ನಡೆದಿದ್ದು, ತಕ್ಷಣ ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ರೈಲ್ವೆ ಇಲಾಖಾಧಿಕಾರಿಗಳು ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್(16595), ಕಾರವಾರ-ಬೆಂಗಳೂರು ಪಂಚಗಂಗ ಎಕ್ಸ್‌ಪ್ರೆಸ್(16596), ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು(16586), ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್(16512) ರೈಲುಗಳು ಪಥ ಬದಲಿಸಿ ಚಲಿಸಲಿದೆ ಎಂದು ತಿಳಿದು ಬಂದಿದೆ.