ಜಿಲ್ಲೆ

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾ ವರ್ಧಂತಿ , ಕೋಲ ಸೇವೆ ಸಂಪನ್ನ

ಹರೀಶ ಎಂ.

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ತಂತ್ರಿ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು.

ಬೆಳಗ್ಗೆ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಇವರಿಂದ ಭಜನ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.

ಬಳಿಕ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಇವರಿಂದ ಭಕ್ತಿಗಾನ ಸುಧೆ, ಸಂ ಸ್ಪೂರ್ತಿ ಮಹಿಳಾ ಭಜನಾ ಮಂಡಳಿ ಪದವಿನಂಗಡಿ ಮತ್ತು ಗುರುನಗರ ಶ್ರೀ ನಾರಾಯಣಗುರು ಸೇವಾಸಂಘದವರಿಂದ ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು. ರಾತ್ರಿ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು.

ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.