ಜೋಗಿ ಸಮಾಜ ಸುಧಾರಕ ಸಂಘದ ವಾರ್ಷಿಕೋತ್ಸವದಲ್ಲಿ ಸಾಧಕಿ ಭವಾನಿ ಜೋಗಿ ಅವರನ್ನು ಸನ್ಮಾನಿಸಲಾಯಿತು. 
ಜಿಲ್ಲೆ

ಸಾಧಕಿ ಭವಾನಿ ಜೋಗಿ ಅವರಿಗೆ ಸನ್ಮಾನ

Mangaluru - Shravan Kumar Nala

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ಸಮೀಪದ ಗೋರಕ್ಷ ನಾಥ ಜ್ಞಾನ ಮಂದಿರದಲ್ಲಿ ಜೋಗಿ ಸಮಾಜ ಸುಧಾರಕ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಂತರ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡೆ, ಸಮಾಜ ಮುಖಿ ಸೇವೆ, ಈಜು ಮುಂತಾದ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಭವಾನಿ ಜೋಗಿ ಅವರನ್ನು ಸನ್ಮಾನಿಸಲಾಯಿತು.