ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬಸ್ ಸಂಚಾರ ವ್ಯತ್ಯಯಗೊಂಡಿದೆ. ಬಂದಿಗೆ ಸ್ವಯಂ ಪ್ರೇರಿತರಾಗಿ ಸಾರ್ವಜನಿಕರು ಬೆಂಬಲ ಸೂಚಿಸಿದರು.ದ್ಯ
ಸದ್ಯಕ್ಕೆ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಐದಾರು ಕೆಎಸ್ಆರ್ಟಿಸಿ ಬಸ್ಗಳಿಗೆ ಕಲ್ಲುತೂರಾಟ ನಡೆದಿದೆ. ಒಂದೆರಡು ದ್ವಿಚಕ್ರ ವಾಹನಗಳು ಜಗಮಗುಂಡಿದೆ,ಗರದ ಅಣೆಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಸರ್ಪಗಾವಲು ಆಯೋಜಿಸಲಾಗಿದೆ.
ನಗರದ ಆಯಕಟ್ಟಿನ ಪ್ರದೇಶದಲ್ಲಿ ಬಿಗಿ ಬಂದೋಬಸ್ತು ಹಾಗೂ ತಪಾಸನೆ ನಡೆಸಲಾಗುತ್ತಿದೆ.
ಈ ಸಂದರ್ಭ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಮೇ ನಿಷೇಧಾಜ್ಞೆ ಕೋರಿ ಮಂಗಳೂರು ನಗರ ವಿಶೇಷ ವಿಭಾಗ ಇನ್‌ಸ್ಪೆಕ್ಟರ್ ಕಮಿಷನರ್‌ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ 153ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೇ 2ರ ಬೆಳಗ್ಗೆ 6.00ರಿಂದ ಮೇ 6ರ ಬೆಳಗ್ಗೆ 6.00ರವರೆಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.