ಜಿಲ್ಲೆ

ಪೊಲೀಸ್ ಪೂರ್ವಾನುಮತಿ ನಿರಾಕರಣೆ ಉಲ್ಲಂಘಿಸಿ ಪ್ರತಿಭಟನೆ ಮಾಡಿದವರ ಮೇಲೆ ಎಫ್‌ಐಆರ್

ಮಂಗಳೂರು: ಪ್ರತಿಭಟನೆ ನಡೆಸಲು ಪೊಲೀಸ್ ಪೂರ್ವಾನುಮತಿ ನಿರಾಕರಿಸಿರುವುದನ್ನು ಉಲ್ಲಂಘಿಸಿ ಧರಣಿ ನಡೆಸಿದ ಮುನೀರ್ ಕಾಟಿಪಳ್ಳ ಹಾಗೂಇತರರ ವಿರುದ್ಧ ಕಾವೂರು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ದುರಸ್ಥಿ, ಕೂಳೂರು ಸೇತುವೆ ಕಾಮಗಾರಿ ತ್ವರಿತಗೊಳಿಸಲು ಹಾಗೂ ನಂತೂರು ಮೇಲ್ಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮಂಗಳವಾರ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಗೆ ಪೂರ್ವಾನುಮತಿ ನಿರಾಕರಿಸಿದ್ದರೂ ಉಲ್ಲಂಘಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾನ್‌ಸ್ಟೇಬಲ್ ರಾಘವೇಂದ್ರ ಪ್ರಕರಣ ದಾಖಲಿಸಿದ್ದಾಶೆ