ಜಿಲ್ಲೆ

ರೆಸಾರ್ಟ್-ಹೋಮ್‌ಸ್ಟೇ ಭದ್ರತೆ, ಸುರಕ್ಷತೆ ಕಟ್ಟುನಿಟ್ಟಿಗೆ ಸೂಚನೆ

ಮಂಗಳೂರು: ಸರ್ಕಾರದ ಸುತ್ತೋಲೆಯಂತೆ ರೆಸಾರ್ಟ್ ಹಾಗೂ ಹೋಮ್‌ಸ್ಟೇಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ಸೂಚನೆ ನೀಡಿದ್ದಾರೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಕರಾವಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ರೆಸಾರ್ಟ್ ಹಾಗೂ ಹೋಮ್‌ಸ್ಟೇಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಇಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆಗಳು ಆಗದಂತೆ ಎಚ್ಚರ ವಹಿಸಬೇಕಾದ ಜವಾಬ್ದಾರಿ ಮಾಲೀಕರದ್ದಾಗಿದೆ. ನೋಂದಣಿ ಹಾಗೂಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದವರು ಹೇಳಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಡಿಸಿಪಿ ಸಿದ್ದಾರ್ಥ ಗೋಯೆಲ್, ಅಬಕಾರಿ, ಪ್ರವಾಸೋದ್ಯಮ ಮೊದಲಾದ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. 118 ರೆಸಾರ್ಟ್, ಹೋಮ್‌ಸ್ಟೇ ಮಾಲೀಕರು ಪಾಲ್ಗೊಂಡಿದ್ದರು.