ಜಿಲ್ಲೆ

ಹಿಂದೂಗಳ ಪಾಲ್ಗೊಳ್ಳುವಿಕೆ ಸನಾತನ ಧರ್ಮಕ್ಕೆ ಶಕ್ತಿ ಆರ್‌ಎಸ್‌ಎಸ್ ಮುಖಂಡ ಪಿ.ಎಸ್.ಪ್ರಕಾಶ್ ಅಭಿಮತ

ಮಂಗಳೂರು: ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂ ಸಮಾಜದ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಈ ಮೂಲಕ ಎಲ್ಲರೂ ಸಂಘಟಿತರಾಗಿ ಸನಾತನ ಧರ್ಮಕ್ಕೆ ಶಕ್ತಿ ತುಂಬಲು ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಪಿ.ಎಸ್.ಪ್ರಕಾಶ್ ಹೇಳಿದರು.

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಸಂದರ್ಭ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ನಮ್ಮ ಪೂರ್ವಜನರು ಆಚರಿಸಿಕೊಂಡ ಬಂದ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷವಾದ ಹಿನ್ನೆಲೆ ಇದೆ. ಅವುಗಳಿಗೆ ಲೋಪವಾಗದಂತೆ ಹಿಂದೂ ಧರ್ಮದ ಉನ್ನತಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ ಎಂದವರು ಹೇಳಿದರು.

ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ಮಂಜುನಾಥ್ ಭಂಡಾರಿ ಶೆಡ್ಡೆ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ವಿಎಚ್‌ಪಿ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಮನಪಾ ನಿಕಟಪೂರ್ವ ಸದಸ್ಯೆ ರಂಜಿನಿ ಕೋಟ್ಯಾನ್, ಕೊಂಚಾಡಿ ನಾಗಕನ್ನಿಕಾ ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರ ಬಾಲಕೃಷ್ಣ ಕೊಟ್ಟಾರಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಪ್ರಕಾಶ್ ಬಿ.ಎನ್., ಡಾ.ಹರಿಕಿಶನ್ ನಾಯ್ಕ, ಕೃಷ್ಣಪ್ಪ ಪೂಜಾರಿ ಪಳನೀರು, ಬಿಲ್ಡರ್ ಹರೀಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆಶಿಕ್ ಬಳ್ಳಾಲ್ ಕೂಳೂರುಬೀಡು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

ಪ್ರ.ಕಾರ್ಯದರ್ಶಿ ಸುಧಾಕರ ಆಳ್ವ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್ ಪೂಜಾರಿ ವಂದಿಸಿದರು. ಪ್ರಿಯಾ ಹರೀಶ್ ಹಾಗೂ ಶಿಲ್ಪಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.