ಜಿಲ್ಲೆ

ನ. 24ರಂದು ಕರಾವಳಿ ಕುರುಬರ ಸಂಘದಿಂದ ಕನಕ ಜಯಂತಿ

ಮಂಗಳೂರು: ಕರಾವಳಿ ಕುರುಬರ ಸಂಘದ ವತಿಯಿಂದ ನ. 24ರಂದು ಉರ್ವಸ್ಟೋರ್‌ನ ಡಾ.ಅಂಬೇಡ್ಕರ್ ಭವನದಲ್ಲಿ 537ನೇ ಕನಕದಾಸ ಜಯಂತಿ ಆಚರಣೆ ನಡೆಯಲಿದೆ.

ಬೆಳಗ್ಗೆ 8.30ಕ್ಕೆ ಉರ್ವಸ್ಟೋರ್‌ನ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಕುಂಭ ಮೇಳ, ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದ್ದು ಅಂಬೇಡ್ಕರ್ ಭವನದಲ್ಲಿ ಸಮಾಪನಗೊಳ್ಳಲಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಎನ್.ನರಸಿಂಹರಾಜು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಕೆ.ಆರ್.ನಗರ ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಶ್ರೀ ಶಿವಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಇನ್‌ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಶನ್ ಆ್ಯಂಡ್ ಕಮಿಷನರ್ ಆಫ್ ಸ್ಟ್ಯಾಂಪ್ಸ್‌ನ ಕೆ.ದಯಾನಂದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರಾವಳಿ ಕುರುಬರ ಸಂಘದ ಅಧ್ಯಕ್ಷ ಕೆ.ಎನ್.ಬಸವರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಕೆ.ಎಂ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್, ಮಂಗಳೂರು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ರಾಜು ಕೆ., ದ.ಕ. ಜಿಲ್ಲಾ ಖಜಾನೆಯ ಉಪನಿರ್ದೇಶಕ ಎಂ.ಎಸ್.ರಮೇಶ್, ಬೆಂಗಳೂರಿನ ಇನ್‌ಸೈಟ್ ಐಎಎಸ್‌ನ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಶ್ರೀಧರ್ ಟಿ.ಡಿ., ದ.ಕ. ಜಿಲ್ಲಾ ಪಂಚಾಯಿತಿಯ ಒಂಬುಡ್ಸ್ ಪರ್ಸನ್ ಟಿ.ಎಸ್.ಲೋಕೇಶ್ ಭಾಗವಹಿಸಲಿದ್ದಾರೆ.

ಕರಾವಳಿ ಕುರುಬರ ಸಂಘದ ಗೌರವಾಧ್ಯಕ್ಷ ಡಾ.ಕೆ.ಇ. ಪ್ರಕಾಶ್ ಗೌರವ ಉಪಸ್ಥಿತರಿರಲಿದ್ದಾರೆ. ಚಿಂತಕ ನಿಕೇತ್‌ರಾಜ್ ಮೌರ್ಯ ಕನಕ ಸಂದೇಶ ನೀಡಲಿದ್ದಾರೆ. ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಶಿವಾನಂದ ಯರಝೇರಿ ಪ್ರಾಯೋಜಕತ್ವದಲ್ಲಿ ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ ಎಂದು ಕರಾವಳಿ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ನಿರಂಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.