ಜಿಲ್ಲೆ

ಎಂಡಿಎಂಎ ಡ್ರಗ್ಸ್ ಮಾರಾಟ ಇಬ್ಬರು ಕುಖ್ಯಾತ ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಕಾಟಿಪಳ್ಳದ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ (27)ಹಾಗೂ ಉಮರ್ ಫಾರೂಕ್ ಇರ್ಫಾನ್ (26)ಬಂಧಿತ ಆರೋಪಿಗಳು.


ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಜ್‌ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಪ್ಪು ಬಣ್ಣದ ಸ್ಕೂಟರ್‌ನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಅವರಿಂದ 19 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸ್ವಾಧೀನ ಪಡಿಸಿಕೊಂಡಿದೆ. ಇವುಗಳ ಒಟ್ಟು ಮೌಲ್ಯ 1,92,800 ರೂ. ಎಂದು ಅಂದಾಜಿಸಲಾಗಿದೆ.


ಆರೋಪಿ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೋಂಬಿ ಸೇರಿ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ.


ಆರೋಪಿ ಉಮ್ಮರ್ ಫಾರೂಕ್ ಇರ್ಫಾನ್ ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡುಬಿದಿರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿರ್ವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ,ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನ ಸೇರಿ ಒಟ್ಟು 25 ಪ್ರಕರಣ ದಾಖಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.