ಮಂಗಳೂರು: ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಶವ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು. ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಜೇಶ್ ಯಾವ ಊರಿನವರು? ಸಂಬಂಧಿಕರು ಯಾರೆಂದು ಸಹೋದ್ಯೋಗಿಗಳಿಗೆ ತಿಳಿದಿಲ್ಲ. ಪ್ರತಿ ವರ್ಷವೂ ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗುತ್ತಿದ್ದ ರಾಜೇಶ್ ಸರಳ ಸ್ವಭಾವದವನಾಗಿದ್ದ. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಎಂದು ಆತನ ಮಿತ್ರರು ತಿಳಿಸಿದ್ದಾರೆ.
ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿದ ಪರಿಣಾಮ ಮೃತದೇಹ ಜರ್ಝರಿತವಾಗಿತ್ತು. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿಟ್ಟಿದ್ದಾರೆ. ಹತ್ಯೆ ಮಾಡಿದ ಆರೋಪಿಗಳನ್ನು ಪತ್ತೆ ಮಾಡಿ, ಮೃತನ ಆತ್ಮಕ್ಕೆ ನ್ಯಾಯ ಕಲ್ಪಿಸಬೇಕಾಗಿದೆ.