ಮಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಗುರುವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆ ಸಂದರ್ಭ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಹಲವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮಿ ಪ್ರಶಸ್ತಿಯನ್ನು ಮಂಗಳೂರಿನ ಎಸ್.ಎಂ. ಇಬ್ರಾಹಿಂ (ಯು.ಕೆ.ಬಿ.) ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರದಾನ ಮಾಡಿದರು. ಈ ಸಂದರ್ಭ ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ, ಉದ್ಯಮಿ ಅಬ್ದುಲ್ ಮಜೀದ್ ಪಿ.ಪಿ. ಮೊದಲಾದವರಿದ್ದರು.