ಮಂಗಳೂರು: ನಾಲ್ಕು ದಶಕಗಳಿಂದ ತುಳುಕೂಟದ ಸಾರಥ್ಯವನ್ನು ಮುನ್ನಡೆಸಿದ ಅನುಭವಿ ಸಂಘಟಕ, ಮರೋಳಿ ನಿವಾಸಿ ದಾಮೋದರ ನಿಸರ್ಗ (76) ಶನಿವಾರ ಅಲ್ಪ ಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು, ಕನ್ನಡ ಸಾಹಿತ್ಯ ಸಂಘಟನೆಗಳಲ್ಲಿ ಸಕ್ರೀಯರಾಗಿ ಹಲವು ಸಾಹಿತ್ಯ ಸಮ್ಮೇಳನಗಳ ಯಶಸ್ಸಿಗೆ ಶ್ರಮಿಸಿದ್ದರು. ತುಳು ಕೂಟದ ಮೂಲಕ ತುಳು ಸಾಹಿತ್ಯ ಬೆಳವಣಿಗೆಗೆ ಅದ್ವಿತಿಯ ಕೊಡುಗೆ ನೀಡಿದ್ದರು.
ಸಾಹಿತ್ಯ ಸಂಘಟನೆಯ ಪ್ರವೃತ್ತಿಯೊಂದಿಗೆ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದ ದಾಮೋದರ ನಿಸರ್ಗರು, ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಗೋಕರ್ಣನಾಥ ಬ್ಯಾಂಕ್ ಅಧ್ಯಕ್ಷರಾಗಿ, ಕಂಕನಾಡಿ ಗರೋಡಿಯ ಆಡಳಿತ ಮಂಡಳಿ ಸದಸ್ಯರಾಗಿ, ಕಂಕನಾಡಿ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕುಡ್ಲ ತುಳುಕೂಟದ ಅಧ್ಯಕ್ಷರಾಗಿ, ತುಳು ಒಕ್ಕೂಟದ ಕಾರ್ಯಾಧ್ಯಕ್ಷರಾಗಿ, ಎ ಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾಗಿ, ದೋಗ್ರ ಪೂಜಾರಿ ಯಕ್ಷಗಾನ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿ, ಹಲವು ಸಂಘ-ಸಂಸ್ಥೆಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ, ತನ್ನನ್ನು ತೊಡಗಿಸಿಕೊಂಡಿದ್ದರು.
ಸಂತಾಪ: ಇವರ ನಿಧನಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ವಿಶ್ರಾಂತ ಕುಲಪತಿಗಳಾದ ಪ್ರೊ.ಬಿ.ಎ. ವಿವೇಕ ರೈ, ಡಾ.ಕೆ. ಚಿನ್ನಪ್ಪ ಗೌಡ, ಡಾ. ಹರಿಕೃಷ್ಣ ಪುನರೂರು ಡಾ.ಗಣೇಶ ಅಮೀನ್ ಸಂಕಮಾರ್, ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕದ್ರಿ ನವ ನೀತಶೆಟ್ಟಿ, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥಗಟ್ಟಿ, ತುಳು ಕೂಟದ ಪ್ರ.ಕಾರ್ಯದರ್ಶಿ ರವಿ ಅಲೆವೂರಾಯ ಮೊದಲಾದವರು ಸಂತಾಪ ಸೂಚಿಸಿದ್ದಾರೆ.