ಜಿಲ್ಲೆ

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್ ನಿಯೋಜಿತ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ

ಮಂಗಳೂರು : ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನ 2025-26ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ. ಸಚ್ಚಿದಾನಂದ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಫೆ.2 ರಂದು ನಡೆದ ಅಸೋಸಿಯೇಷನ್ ನ 49ನೇ ವಾರ್ಷಿಕ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.

ಡಾ.ಸಚ್ಚಿದಾನಂದ ರೈ ಅವರು ಕೆನರಾ ಆರ್ಥೋಪೆಡಿಕ್ ಅಸೋಸಿಯೇಷನ್ ನ ಅಧ್ಯಕ್ಷ ರಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನ ಮಂಗಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ.