ಜಿಲ್ಲೆ

ಮಣಿಪಾಲದಲ್ಲಿ ಬಸ್ ಬೆಂಕಿಗಾಹುತಿ

ಗೋಪಾಲಕೃಷ್ಣ ಪಾದೂರ್

ಉಡುಪಿ : ಬಳ್ಳಾರಿಯಿಂದ  ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸ್ಲೀಪರ್ ಕೋಚ್ ಬಸ್ ಮಣಿಪಾಲ ಟೈಗರ್ ಸರ್ಕಲ್ ಬಳಿ ಬುಧವಾರ ಮುಂಜಾನೆ  ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟು ಕರಕಲಾಗಿದೆ.

ಮಣಿಪಾಲದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದ ಸಂದರ್ಭ  ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಇಳಿಸಲಾಗಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದರು. ಆದರೆ ಪ್ರಯೋಜನವಾಗಲಿಲ್ಲ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಣಿಪಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.