ಜಿಲ್ಲೆ

ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಮಣ್ಣಪಳ್ಳ ಕೆರೆಗೆ ಬಿದ್ದು ಸಾವು

ಗೋಪಾಲಕೃಷ್ಣ ಪಾದೂರ್

ಉಡುಪಿ : ಮಣಿಪಾಲ  ಮಣ್ಣಪಳ್ಳ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಗುರುವಾರ ಸಾವನ್ನಪ್ಪಿದ್ದಾರೆ.

ಮೃತರನ್ನು ಕುಂದಾಪುರದ ಪ್ರಕಾಶ್ (35ವ) ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಗಾಳಗಾರಿಕೆಯ ಪರಿಕರಗಳು ಲಭ್ಯವಾಗಿದ್ದು, ಪ್ರಕಾಶ್ ಅವರು ಆಯಾತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರ ಬಹುದೆಂಬ ಶಂಕೆವ್ಯಕ್ತವಾಗಿದೆ.

ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವು ನೀಡಿದರು.