ಜಿಲ್ಲೆ

ಮಂಜೇಶ್ವರ ರೈಲು ನಿಲ್ದಾಣದಲ್ಲಿ ಹೆಚ್ಚಿನ ರೈಲುಗಳ ನಿಲುಗಡೆಗೆ ಒತ್ತಾಯ

Mangaluru - Prakash MC Manjeshwar

ಮಂಗಳೂರು: ಮಂಜೇಶ್ವರ ರೈಲು ನಿಲ್ದಾಣದಲ್ಲಿ ಹೆಚ್ಚಿನ ರೈಲುಗಳ ನಿಲುಗಡೆಗೆ ಆಗ್ರಹಿಸಿ ಸಿಪಿಐ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಜೇಶ್ವರ ತಾಲೂಕು ಅಭಿವೃದ್ಧಿ ಸಮಿತಿ ಸದಸ್ಯ ಬಿ.ವಿ.ರಾಜನ್ ರೈಲ್ವೆ ಪ್ರಯಾಣಿಕರ ಆಮ್ನೆಸ್ಟಿ ಸಮಿತಿ ಅಧ್ಯಕ್ಷ ಪಿ.ಕೆ.ಕೃಷ್ಣದಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕದಿಂದ ಕೇರಳ ಪ್ರವೇಶಿಸುವ ರೈಲುಗಳಿಗೆ ಮಂಜೇಶ್ವರ ಮೊದಲ ರೈಲು ನಿಲ್ದಾಣವಾಗಿದೆ. ಮಾವೇಲಿ ಎಕ್ಸ್‌ಪ್ರೆಸ್ ಮತ್ತು ಪರಶುರಾಮ್ ಎಕ್ಸ್‌ಪ್ರೆಸ್ ಸೇರಿದಂತೆ ಏಳು ರೈಲುಗಳಿಗೆ ಪ್ರಸ್ತುತ ಈ ನಿಲ್ದಾಣದಲ್ಲಿ ನಿಲುಗಡೆ ಇಲ್ಲ. ಈ ರೈಲುಗಳನ್ನು ಅನೇಕ ಪ್ರಯಾಣಿಕರು ಅವಲಂಬಿಸಿದ್ದಾರೆ. ಇದರೊಂದಿಗೆ ಮಂಜೇಶ್ವರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳನ್ನು ಪ್ರಯಾಣಿಕರು ಮಳೆಯಲ್ಲಿ ನೆನೆಯದಂತೆ ಎತ್ತರಿಸಬೇಕು.ಪ್ಲಾಟ್‌ಫಾರ್ಮ್‌ಗಳಲ್ಲಿ ಮೇಲ್ಛಾವಣಿ ನಿರ್ಮಿಸಿ, ನಿಲ್ದಾಣದಲ್ಲಿನ ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಆಧರಿಸಿ, ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಎತ್ತರಿಸಲು ಎರಡೂವರೆ ಕೋಟಿ ರೂಪಾಯಿ ಮಂಜೂರು ಮಾಡಲಾಗುವುದು ಎಂದು ಪಿ.ಕೆ.ಕೃಷ್ಣದಾಸ್ ಮಾಹಿತಿ ನೀಡಿದರು. ಬಿ.ವಿ.ರಾಜನ್, ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ ಹಾಗೂ ಮಂಜೇಶ್ವರ ತಾಲೂಕು ಅಭಿವೃದ್ಧಿ ಸಮಿತಿ ಸದಸ್ಯ ರೈಲ್ವೇ ಪ್ರಯಾಣಿಕರ ಅಮ್ನೆಸ್ಟಿ ಸಮಿತಿಯ ಅಧ್ಯಕ್ಷ ಪಿ.ಕೆ.ಕೃಷ್ಣದಾಸ್ ಅವರಿಗೆ ಮನವಿ ಸಲ್ಲಿಸಿದರು.