ಗದಗ: ಗದಗ ತಾಲೂಕಿನ ಅಂತುರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ ಗದಗ ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ.ದೇವರಮನಿ ಅವರು ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನೆಡೆಸಿದರು.
ನರೇಗಾ ಯೋಜನೆಯ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಎಂಬ ಅಭಿಯಾನದಡಿ ಏಪ್ರಿಲ್ 01 ರಿಂದ ಮೇ ಅಂತ್ಯದವರೆಗೆ ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಿಗೆ ನಿರಂತರವಾಗಿ ಕೆಲಸ ನೀಡುವ ಬಗ್ಗೆ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ನರೇಗಾಯೋಜನೆಯಡಿ ಪಡೆದ ಉದ್ಯೋಗ ಚೀಟಿಯ ಮಹತ್ವ ತಿಳಿದು ತಿಳಿದು ದೊರೆಯುವ ಸೌಲಭ್ಯವನ್ನು ಪಡೆಯಲು ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು, ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು, ಅಳತೆಗೆ ತಕ್ಕಂತೆ ಕೆಲಸ ನಿರ್ವಹಣೆ ಮಾಡಿದರೆ ಮಾತ್ರ ಪೂರ್ಣ ಪ್ರಮಾಣದ ಕೂಲಿ ಮೊತ್ತ ಲಭ್ಯವಾಗುತ್ತದೆ ಎಂದು ತಿಳಿಸಿದರು.
2024 ರ ಲೋಕಸಭೆ ಚುನಾವಣೆಯ ಪ್ರಯುಕ್ತ ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಮತದಾರರು ಕೂಡ ಮತದಾನ ಮಾಡುವುದು ಅವರ ಆದ್ಯ ಕರ್ತವ್ಯವಾಗಿರುತ್ತದೆ. ಮತದಾನ ಪ್ರಕ್ರಿ0iÉುಯಿಂದ ಯಾವೊಬ್ಬ ವ್ಯಕ್ತಿಯು ಕೂಡ ಹೊರಗುಳಿಯಬಾರದು ಎಂದು ತಿಳಿಸಿದರು, ನಂತರ ಪಿ ಡಿ ಓ ಎಚ್ ಎಸ್ ಚಟ್ರಿ ರವರು ಹಾಜರಿದ್ದ ಸಿಬ್ಬಂದಿಗಳಿಗೆ ಹಾಗೂ ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಕುಮಾರ್ ಪೂಜಾರ್, ಜಿಲ್ಲಾ ಪಂಚಾಯತ್ ನರೇಗಾ ಸಿಬ್ಬಂದಿಗಳಾದ ಎ.ಡಿ.ಪಿ.ಸಿ ಕಿರಣ್ ಕುಮಾರ್ , ಡಿ.ಎಮ್. ಎಸ್ ಮಲ್ಲಿಕಾರ್ಜುನ ಸರ್ವಿ. ಡಿ.ಐ.ಇ.ಸಿ ವಿ ಎಸ್ ಸಜ್ಜನ ಹಾಗೂ ತಾಲೂಕು ನರೇಗಾ ಸಿಬ್ಬಂದಿ ಟಿ.ಐ.ಇ.ಸಿ ವಿರೇಶ್, ಬಿ.ಎಫ್.ಟಿ ದಾವಲ್ ಮತ್ತು ನರೇಗಾ ಕೂಲಿಕಾರರು ಹಾಜರಿದ್ದರು.