ಮಾನ್ವಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಗ್ರಾಮ ಚಲೋ ಅಭಿಯಾನ ಪೂರ್ವಭಾವಿ ಸಭೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ಉದ್ಘಾಟಿಸಿದರು. ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಮಾನ್ವಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಜಿಲ್ಲಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗೌಡ ನಕ್ಕುಂದಿ, ಗ್ರಾಮ ಚಲೋ ಸಹ ಸಂಚಾಲಕ ಮಲ್ಲಿಕಾರ್ಜುನ ಇತರರಿದ್ದರು. 
ಜಿಲ್ಲೆ

ಕೇಂದ್ರ ಯೋಜನೆ ಮನವರಿಕೆ ಮಾಡಿ

ಮಾನ್ವಿ: ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಗ್ರಾಮ ಚಲೋ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮನೆ ಮನೆಗೆ ಬಿಜೆಪಿ ಮನ ಮನಕ್ಕೆ ಮೋದಿ ಘೋಷಣೆಯೊಂದಿಗೆ ಫೆ.9 ರಿಂದ 11 ರವರೆಗೆ ಅಭಿಯಾನ ರಾಷ್ಟ್ರವ್ಯಾಪಿ ನಡೆಯಲಿದೆ. ಕಾರ್ಯಕರ್ತರು ಯೋಜನೆಗಳನ್ನು ಜನರಿಗೆ ತಿಳಿಸಲಿ ಎಂದರು.

ಕೇಂದ್ರ ಬಿಜೆಪಿ ಸರ್ಕಾರದ ಮಹತ್ವ ಪೂರ್ಣ ಜನಕಲ್ಯಾಣ ಯೋಜನೆಗಳ ಮೂಲಕ ಪ್ರತಿ ಮನೆಗಳಿಗೆ ಭೇಟಿ ನೀಡಿ ಜನರಿಗೆ ತಿಳಿಸಬೇಕು. ನವ ಭಾರತವನ್ನು ಕಟ್ಟಲು ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಬರಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.
ಪ್ರಮುಖರಾದ ಸುಲೋಚನಾ ಕುಮಾರಸ್ವಾಮಿ, ಅನಿಲ್‌ಕುಮಾರ್, ಅರಕೇರಿ ರಾಮಣ್ಣ ನೀರಮಾನ್ವಿ, ಅಯ್ಯಪ್ಪ ನಾಯಕ ಮ್ಯಾಕಲ್ ಇತರರಿದ್ದರು.