ಜಿಲ್ಲೆ

ಗ್ರಾಮ ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ಸಜ್ಜಾಗಲಿ; ಶಾಸಕ ರಾಜಾ ವೆಂಕಟಪ್ಪ ನಾಯಕ

ಮಾನ್ವಿ: ಮುಂಬರುವ ಜಿಪಂ, ತಾಪಂ ಹಾಗೂ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸುವ ಗ್ರಾಪಂ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕೆಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದ ಶಾಸಕರಕಚೇರಿಯಲ್ಲಿ ಏರ್ಪಡಿಸಿದ್ದ ಮಾನ್ವಿ, ಸಿರವಾರ ತಾಲೂಕುಗಳ ಗ್ರಾಪಂ ಚುನಾವಣೆ ಸಿದ್ಧತಾ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರದಾವಧಿಯಲ್ಲಿ ರೈತರ ಸಾಲಮನ್ನಾ, ಎಲ್ಲ ರ್ವಗದ ಜನರ ಏಳ್ಗೆಗೆ ಜಾರಿಗೊಳಿಸಿರುವ ಜನಪ್ರಿಯ ಯೋಜನೆಗಳನ್ನು ಕಾರ್ಯಕರ್ತರು ಮತದಾರರಿಗೆ ತಿಳಿಸಬೇಕು ಎಂದರು.

ಬಿಜೆಪಿ ಸರ್ಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದರೂ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ನಯಾಪೈಸೆ ಅನುದಾನ ನೀಡಿಲ್ಲ. ಎಚ್‌ಡಿಕೆ ಅಧಿಕಾರವಧಿಯಲ್ಲಿ ಬಿಡುಗಡೆಯಾದ ಅನುದಾನದಲ್ಲೇ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ ಎಂದರು.

ಜೆಡಿಎಸ್ ರಾಜ್ಯ ಯುವ ಮುಖಂಡ ರಾಜಾ ರಾಮಚಂದ್ರ ನಾಯಕ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಗೌಡ ಬಲ್ಲಟಗಿ, ಜಂಭುನಾಥಯದವ್, ವಿಜಯಲಕ್ಷ್ಮೀ ಸಿರವಾರ, ತಾಪಂ ಸದಸ್ಯ ಫಕೀರಪ್ಪ, ಮಹ್ಮದ್ ಇಸ್ಮಾಯಿಲ್, ಮಲ್ಲಪ್ಪ ಹೂಗಾರ ಇದ್ದರು.