ಜಿಲ್ಲೆ

ಮನೋ ರೋಗಿಗಳ ಬಗ್ಗೆ ನಿರ್ಲಕ್ಷ ಬೇಡ; ನ್ಯಾಯಾಧೀಶ ಆಶಪ್ಪ ಸಣ್ಣಮನಿ ಸಲಹೆ ಮಾನಸಿಕ ಆರೋಗ್ಯ ದಿನಾಚರಣೆ

ಮಾನ್ವಿ : ಮಾನಸಿಕವಾಗಿ ಅಸ್ವಸ್ಥಗೊಂಡವರ ಬಗ್ಗೆ ನಿರ್ಲಕ್ಷೃ ಮಾಡದೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಧೀಶ ಆಶಪ್ಪ ಸಣ್ಣಮನಿ ಹೇಳಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಸಹಯೋಗದೊಂದಿಗೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಕೆಲವರು ಕೆಲ ಘಟನೆಗಳಿಂದ ಮಾನಸಿಕವಾಗಿ ಅಸ್ವಸ್ಥಗೊಂಡಿರುತ್ತಾರೆ ಇದಕ್ಕೆ ಮೂಡನಂಬಿಕೆಗಳಿಗೆ ಮೊರೆ ಹೋಗದೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯಸ್ವಾಮಿ ಮಾತನಾಡಿ, ಒತ್ತಡದ ದಿನಮಾನಗಳಲ್ಲಿ ಜನರು ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ನೆಮ್ಮದಿಯಿಂದ ಇರುವ ಗುಣ ಬೆಳಸಿಕೊಳ್ಳಬೇಕು. ಮಾನಸಿಕ ಕಾಯಿಲೆಗೆ ಸೂಕ್ತ ಚಿಕಿತ್ಸೆ ಲಭ್ಯವಿದೆ. ಪ್ರತಿ ಮಂಗಳವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತಿದೆ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರಪಾಟೀಲ್, ಮಾನಸಿಕ ರೋಗ ತಜ್ಞ ಮನೋಹರ ಪತ್ತಾರ, ಸರ್ಕಾರಿ ಅಭಿಯೋಜಕಿ ಅರ್ಚನಾ ಯಾದವ್, ವಕೀಲರಾದ ಗುಮ್ಮಾ ಬಸವರಾಜ, ಎ.ಬಿ.ಉಪ್ಪಳಮಠ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪನಾಯಕ, ಡಾ.ಚಂದ್ರಶೇಖರ, ಡಾ.ಸುಧಾಕರ್, ಡಾ.ಶರಣಬಸವ, ಡಾ.ದೀಪಾ, ಡಾ.ಅನ್ನಪೂರ್ಣ, ನಿರೀಕ್ಷಣಾಧಿಕಾರಿ ಚಂದ್ರಶೇಖರ ಇತರರು ಇದ್ದರು.