ಜಿಲ್ಲೆ

ಮರಡಿಹಳ್ಳಿ ಶಾಲೆ ಶತಮಾನೋತ್ಸವ

Chitradurga

ಚಿತ್ರದುರ್ಗ: ಹಿರಿಯೂರು ತಾಲೂಕು ಮರಡಿಹಳ್ಳಿ ಸರ್ಕಾರಿ ಶಾಲೆ ಶತಮಾನೋತ್ಸವ ಮತ್ತು ಅಮೃತ ಮಹೋತ್ಸವ ಸಮಾರಂಭ ಫೆ.11ರಿಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಕಂಠೀರವ ಬಾಲಸರಸ್ವತಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಾಥಮಿಕ ಶಾಲೆ ಶತಮಾನೋತ್ಸವ ಹಾಗೂ ಫ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು 11ರಂದು ಆಯೋಜಿಸಲಾಗಿದೆ ಎಂದರು.

ಅಂದು 10 ಗಂಟೆಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದು, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಶೈಕ್ಷಣಿಕ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಗ್ರಾಪಂ ಅಧ್ಯಕ್ಷೆ ಟಿ.ಕವಿತಾ ಇತರರು ಉಪಸ್ಥಿತರಿರುತ್ತಾರೆ.

ಎರಡು ದಿನಗಳ ಕಾಲ ವಿಶೇಷ ಉಪನ್ಯಾಸ, ವಿವಿಧ ಸಾಂಸ್ಕೃತಿಕ ಕಾರ‌್ಯಕ್ರಮಗಳನ್ನು ಆಯೋಜಿಸಲಾಗಿದೆ. ತುಮಕೂರು ರಾಮಕೃಷ್ಣ ವಿವೇಕನಂದಾಶ್ರಮದ ಶ್ರೀ ಸ್ವಾಮಿ ವೀರೇಶಾನಂದ ಸರಸ್ವತಿ, ಬೆಂಗಳೂರು ಆರ್.ವಿ.ಶಿಕ್ಷಣ ಸಂಸ್ಥೆಗಳ ಯೋಜನಾ ನಿರ್ದೇಶಕ ಡಾ.ಟಿ.ವಿ.ರಾಜು, ಕೆಎಂಎಫ್ ನಿವೃತ್ತ ಜಂಟಿ ನಿರ್ದೇಶಕ ಡಾ.ಬಾಲಸುಬ್ರಮಣ್ಯಂ ಉಪನ್ಯಾಸ ನೀಡಲಿದ್ದಾರೆ.

12ರ ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಎಚ್.ಏಕಾಂತಯ್ಯ, ಹೈಕೋರ್ಟ್ ವಕೀಲ ಪ್ರೊ.ರವಿವರ್ಮಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು. ಎನ್.ಆರ್.ಲಕ್ಷ್ಮೀಕಾಂತ್, ಎಸ್.ಕೆ.ದಿಲೀಪ್‌ಕುಮಾರ್, ಕೆ.ಸುದರ್ಶನ್, ಯಶೋಧಮ್ಮ, ವೇದಾ ಇತರರು ಇದ್ದರು.