ಮಡಿಕೇರಿ:
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ, ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಸಂಭ್ರಮದಿAದ ನಡೆಯಿತು.
ಮಡಿಕೇರಿ ಸಮೀಪದ ತಾಳತ್ತಮನೆ ಗ್ರಾಮದಲ್ಲಿರುವ ಸಂಘದ ನಿವೇಶನ ಆವರಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎA. ಪರಮೇಶ್ವರ ಅವರು ಸಮಾಜ ಬಾಂಧವರ ಪ್ರಗತಿಗೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆಗಾಗಿ ಸಂಘಕ್ಕೆ ಐದು ಎಕರೆ ಭೂಮಿ ಪಡೆಯಲು ಪ್ರಯತ್ನಿಸಬೇಕು.
ಸಮುದಾಯ ಮಂದಿಯ ಆರೋಗ್ಯ ಸುಧಾರಣೆಗೆ ಆರೋಗ್ಯ ನಿಧಿ ಸಂಗ್ರಹಿಸಿ ಪ್ರತ್ಯೇಕ ಖಾತೆ ತೆರೆಯಬೇಕು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಮರಾಠ ಮರಾಟಿ ವಿದ್ಯಾಭಿವೃದ್ಧಿ ನಿಧಿ ಖಾತೆಯನ್ನು ಆರಂಭಿಸಬೇಕು, ಸರ್ಕಾರದ ಸಮಿತಿಗಳ ಸಭೆಯಲ್ಲಿ ಸಂಘವನ್ನು ಪ್ರತಿನಿಧಿಸಲು ಸಮಾಜ ಬಾಂಧವರು ಮುಂದೆ ಬರಬೇಕು, ಸರ್ವರೂ ಸಂಘದ ಅಜೀವ ಸದಸ್ಯತ್ವ ಪಡೆದು ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡಬೇಕೆಂದರು.
ಸಭೆ ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಐಎಫ್‌ಎಸ್ ಅಧಿಕಾರಿ ಸುಂದರ ನಾಯ್ಕ್, ಸಂಘದ ಏಳಿಗೆಗೆ ಹಾಗೂ ಸಂಘದ ಆಡಳಿತ ಮಂಡಳಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಎಲ್ಲರೂ ಕೈಜೋಡಿಸಬೇಕು. ಕರ್ನಾಟಕದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲು ಐವರು ಪ್ರತಿನಿಧಿಗಳು ಸಹಕರಿಸಬೇಕು. ಸಂಘದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಂಬAಧಪಟ್ಟ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಲಾಗುವುದು. ಕಟ್ಟಡ ಕಾಮಗಾರಿ ಮುಂದುವರಿಸಲು ವೈಯಕ್ತಿಕವಾಗಿ 50 ಸಾವಿರ ರೂ. ದೇಣಿಗೆ ಘೋಷಿಸಿದರು.
ಸಮಾಜದ ಹಿರಿಯ ದೇವಿ ಪ್ರಸಾದ್ ವಾಮನ ನಾಯ್ಕ್ ಮಾತನಾಡಿ ಸಮಾಜ ಬಾಂಧವರು ಸಮಾಜದ ಏಳಿಗೆಗೆ ಆಡಳಿತ ಮಂಡಳಿಯೊAದಿಗೆ ಕೈಜೋಡಿಸಬೇಕೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ಎಂ.ಟಿ. ನಾರಾಯಣ ಸಂಘದ ಆಡಳಿತ ಮಂಡಳಿಗೆ ನಿವೇಶನ ಪಡೆಯುವಲ್ಲಿ ಸಂಘದ ಹಿರಿಯ ಸದಸ್ಯರು ಪಟ್ಟ ಶ್ರಮವನ್ನು ಸ್ಮರಿಸಿದರು. ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲರೂ ಸಹಕರಿಸಬೇಕು ಮತ್ತು ಸದಸ್ಯತ್ವ ಶುಲ್ಕವನ್ನು ಹೆಚ್ಚಿಸಿ ಹಣವನ್ನು ಕ್ರೋಢೀಕರಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಚನಿಯಪ್ಪ ನಾಯ್ಕ್ ದೊಡ್ಡತ್ತೂರು, ಉಪಾಧ್ಯಕ್ಷೆ ಜಿ.ಆರ್. ದೇವಕಿ ನಾಯಕ್, ಯುವ ವೇದಿಕೆ ಅಧ್ಯಕ್ಷ ಎಂ.ಆರ್. ಮೋಹನ ಕಾನೂರು, ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಆರ್. ರತ್ನಮಂಜರಿ, ಕಟ್ಟಡ ಸಮಿತಿ ಅಧ್ಯಕ್ಷ ಎಂ.ಟಿ. ಗುರುವಪ್ಪ ಚಿಕ್ಕತ್ತೂರು, ಉಪ ಸಮಿತಿ ಅಧ್ಯಕ್ಷ ಎಂ.ಎಸ್ ವೆಂಕಪ್ಪ 2ನೇ ಮೊಣ್ಣಂಗೇರಿ, ಧನಂಜಯ ಕುಮಾರ್, ಎಚ್.ಕೆ. ಕುಂಡಾಡು ಹೊನ್ನಪ್ಪ ಕರಿಕೆ ಹಾಗೂ ನಿರಲ್ ಕುಮಾರ್ ಕಾನೂರು ಇದ್ದರು.
2023-24 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 7ನೇ ತರಗತಿ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ವಿವಿಧ ಆಟೋಟ ಸ್ಪರ್ಧೆ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಭೆಯಲ್ಲಿ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಎಂ.ಎA.ಪರಮೇಶ್ವರ ಕೆದಮಳ್ಳೂರು, ಯುವ ವೇದಿಕೆ ಅಧ್ಯಕ್ಷರಾಗಿ ಮೋಹನ ಎಂ.ಆರ್ ಕಾನೂರು ಹಾಗೂ ಮಹಿಳಾ ವೇದಿಕೆ ಅಧ್ಯಕ್ಷರಾಗಿ ರತ್ನಮಂಜರಿ ನರಸಿಂಹ ತಾಳತ್ತಮನೆ ಅವರು ಅವಿರೋಧವಾಗಿ ಮರು ಆಯ್ಕೆಯಾದರು.