ಮಂಗಳೂರು: ಹೊಸ ಚೈತನ್ಯ, ಹೊಸ ಹುರುಪು, ಹೊಸ ಕಲಿಕೆಯೊಂದಿಗೆ ಶಾಲಾ ಪ್ರಾರಂಭೋತ್ಸವ ಸುರತ್ಕಲ್ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಬುಧವಾರ ಜರುಗಿತು.
ಶಾಲೆಯ ಆಟದ ಮೈದಾನದಿಂದ ಬ್ಯಾಂಡ್ ವಾದ್ಯದೊಂದಿಗೆ ಸುರತ್ಕಲ್ ಸರ್ಕಲ್ ಮಾರ್ಗವಾಗಿ ಗೋವಿಂದದಾಸ ಕಾಲೇಜು ಆವರಣವಾಗಿ ವಿದ್ಯಾದಾಯಿನೀ ವಜ್ರ ಮಹೋತ್ಸವ ಸಭಾಂಗಣಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಪುಷ್ಪದಳದೊಂದಿಗೆ ಸ್ವಾಗತಿಸಲಾಯಿತು.
ಹಿಂದು ವಿದ್ಯಾದಾಯಿನೀ ಸಂಘದ ಹಿರಿಯ ಸದಸ್ಯ ಎಚ್.ಯು. ಅನಂತಯ್ಯ ಉದ್ಘಾಟಿಸಿದರು.ಸಂಘದ ಕಾರ್ಯದರ್ಶಿ ಎಚ್.ಶ್ರೀರಂಗ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖಾ ವತಿಯಿಂದ ನೀಡಿದ ಉಚಿತ ಪಠ್ಯ ಪುಸ್ತಕಗಳನ್ನು ಶಿಕ್ಷಣ ಇಲಾಖೆಯ ಸುರತ್ಕಲ್ ಕ್ಲಸ್ಟರ್‌ನ ಸಿಆರ್‌ಪಿ ರಾಮದಾಸ್ ವಿತರಿಸಿದರು. ಮುಖ್ಯಶಿಕ್ಷಕ ಬಾಲಚಂದ್ರ ಕೆ. ಸ್ವಾಗತಿಸಿದರು. ಶಾಲಾ ಸಂಚಾಲಕ ಸುಧಾಕರ ರಾವ್ ಪೇಜಾವರ ಪ್ರಸ್ತಾವನೆಗೈದರು.
ಹಿಂದು ವಿದ್ಯಾದಾಯಿನೀ ಸಂಘದ ಕೋಶಾಧಿಕಾರಿ ಎಚ್.ಎಲ್.ರಾವ್, ಜತೆ ಕಾರ್ಯದರ್ಶಿ ಎಂ.ಜಿ. ರಾಮಚಂದ್ರ, ಸಂಘದ ಜತೆ ಕೋಶಾಧಿಕಾರಿ ರಮೇಶ್ ಟಿ.ಎನ್, ವಿದ್ಯಾದಾಯಿನೀ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಕುಳಾಯಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದೇವದಾಸ್, ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ ಗಂಗಾಧರ ಪೂಜಾರಿ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ದಿವಸ್ಪತಿ ಕಾರ್ಯಕ್ರಮ ನಿರೂಪಿಸಿ, ರೇವತಿ ಬಿ. ವಂದಿಸಿದರು.