ಜಿಲ್ಲೆ

ಅಂಕದ ಜತೆಗೆ ಸಂಸ್ಕಾರಕ್ಕೂ ಒತ್ತು ನೀಡಲು ಶಾಸಕ ಗೋವಿಂದಪ್ಪ ಸಲಹೆ

ಹರ್ಷ ನ.ಪುರೋಹಿತ

ಹೊಸದುರ್ಗ: ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವ ಜತೆಗೆ ಉತ್ತಮ ಸಂಸ್ಕಾರ ರೂಢಿಸಿಕೊಂಡು, ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಸಲಹೆ ನೀಡಿದರು.

ಮಾದಿಗ ನೌಕರರ ಸಾಂಸ್ಕೃತಿಕ ಸಂಘ ಪಟ್ಟಣದ ಆದಿ ಜಾಂಬವ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಸಾಧನೆಯೊಂದಿಗೆ ಉತ್ತಮ ಸಾಮಾಜಿಕ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಂಡರೆ ಅದರ್ಶ ವ್ಯಕ್ತಿಗಳಾಗಲು ಸಾಧ್ಯ ಎಂದರು.

2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಜೆಟ್‌ನಲ್ಲಿ ಶೇ. 25ರಷ್ಟು ಹಣ ಮೀಸಲಿರಿಸಿದ್ದರ ಪರಿಣಾಮ ತಾಲೂಕಿನಲ್ಲಿ 100ಕ್ಕೂ ಹೆಚ್ಚು ಸಮುದಾಯ ಭವನಗಳ ನಿರ್ಮಾಣ ಸಾಧ್ಯವಾಯಿತು ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.