ಜಿಲ್ಲೆ

ಮರ್ಮಾಂಗದ ನೋವಿನಿಂದ ಬಳಲುತ್ತಿದ್ದ ವೃದ್ಧ ಆತ್ಮಹತ್ಯೆ

ಹಾವೇರಿ: ಮಮಾರ್ಂಗದ ನೋವಿನಿಂದ ಬಳಲುತ್ತಿದ್ದ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಬಸಪ್ಪ ಫಕ್ಕೀರಪ್ಪ ಹೊಳಲ (75) ಮೃತ ವೃದ್ಧ.

ಇವರು ಮಮಾರ್ಂಗದ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನೆಯ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.